ಮಾಗಳದಲ್ಲಿ ಇಂದು ರಕ್ತದಾನ ಶಿಬಿರ
ಹೂವಿನಹಡಗಲಿ: ತಾಲೂಕಿನ ಮಾಗಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಅ. 23ರಂದು ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ವೈದ್ಯಾಧಿಕಾರಿ ಡಾ. ಚಂದ್ರಶೇಖರ ಚುಂಗಡಿ ತಿಳಿಸಿದ್ದಾರೆ. ಬಳ್ಳಾರಿ ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕದ ಆದೇಶನುಸಾರ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ ನಡೆಯಲಿದ್ದು, ಗ್ರಾಮದ ವಿವಿಧ ಸಂಘಟನೆ, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸುತ್ತಮುತ್ತಲಿನ ಗ್ರಾಮದ ಜನತೆ ಈ ಶಿಬಿರದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದ್ದಾರೆ.