ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಶಿಕ್ಷಕರ ಚುನಾವಣೆಯಲ್ಲಿ ಮೀಸಲಾತಿ ನೀಡಿ

Lingaraj Badiger
Updated On : 23 Oct 2013, 10:50 am

ಹೂವಿನಹಡಗಲಿ: ಮುಂಬರುವ ಪ್ರಾಥಮಿಕ ಶಾಲಾ ಶಿಕ್ಷಕರ ಚುನಾವಣೆಯಲ್ಲಿ ಪ.ಜಾ. ಮತ್ತು ಪ.ಪಂ. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸೂಕ್ತ ಮೀಸಲಾತಿ ನೀಡದಿದ್ದಲ್ಲಿ ಕೋರ್ಟ್ ಮೊರೆ ಹೋಗಬೇಕಾಗುತ್ತದೆ ಎಂದು ಶಿಕ್ಷಕ ಎಲ್. ಮಧುನಾಯ್ಕ ಎಚ್ಚರಿಕೆ ನೀಡಿದ್ದಾರೆ. ಇಲ್ಲಿನ ಮೌಂಟ್ ಕಾರ್ಮೇಲ್ ಶಾಲಾ ಆವರಣದಲ್ಲಿ ಬೆಂಗಳೂರಿನ ಇಂಡಿಯನ್ ಸೋಸಿಯಲ್ ಇನ್‌ಸ್ಟಿಟ್ಯೂಟ್ ಹಾಗೂ ಕರ್ನಾಟಕ ರಾಜ್ಯ ಪ.ಜಾ. ಮತ್ತು ಪ.ಪಂ. ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಹಿಳಾ ಘಟಕದ ಸಹಯೋಗದಲ್ಲಿ ಆಯೋಜಿಸಲಾಗಿದ್ದ 'ಸಾಮಾಜಿಕ ಪರಿವರ್ತನೆಯಲ್ಲಿ ಶಿಕ್ಷಕರ ಪಾತ್ರ' ಎಂಬ ಶೈಕ್ಷಣಿಕ ಕಾರ್ಯಾಗಾರದಲ್ಲಿ ಮಾತನಾಡಿದರು. ಶಿಕ್ಷಕರಿಗೆ ಬಡ್ತಿ ಹಾಗೂ ಪ್ರಶಸ್ತಿಗಳನ್ನು ನೀಡುವಾಗ ತಾರತಮ್ಯ ಸರಿದೂಗಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಮಾಡಬೇಕೆಂದು ಅವರು, ಶಿಕ್ಷಕರ ಸಮಯ ಪಾಲನೆ, ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಕರಾಗಿ ಕಾರ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಎಂ.ವಿ. ಗಂಗಾವತಿ, ಕಾರ್ಯದರ್ಶಿ ಲಲಿತಾಬಾಯಿ, ಗೌರವ ಸಲಹೆಗಾರ ಜಿ. ಹನುಮಂತಪ್ಪ, ಸಿ. ಚಕ್ರಪತಿ, ಎಚ್. ದೇವಿಂದ್ರಪ್ಪ ಇತರರು ಉಪಸ್ಥಿತರಿದ್ದರು. ಚಾಂದ್‌ಪೀರ ಪ್ರಾಸ್ತಾವಿಕವಾಗಿ ಮಾತನಾಡಿದರು. ಟಿ.ಜಿ. ಶಿವನಾಗಪ್ಪ ಪ್ರಾರ್ಥಿಸಿದರು. ಕೆ. ಬಸವರಾಜ ಸ್ವಾಗತಿಸಿದರು. ಶಿವಕುಮಾರ ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement