ಇಂದು ಸಂವಹನ ಕಾರ್ಯಕ್ರಮ
ಬಳ್ಳಾರಿ: ನಗರದ ಕೋಟೆ ಮಲ್ಲೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಅ. 26ರಂದು ಬೆಳಗ್ಗೆ 10ಕ್ಕೆ ಉಪಗ್ರಹ ಆಧಾರಿತ ಸಂವಹನ ಕಾರ್ಯಕ್ರಮ (ಸ್ಯಾಟ್‌ಕಾಂ)ವನ್ನು ಆಯೋಜಿಸಲಾಗಿದೆ ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವರು ರಾಜ್ಯದ 30 ಜಿಲ್ಲೆಗಳಲ್ಲಿ ಈ ಸಂವಹನ ಕಾರ್ಯಕ್ರಮ ನಡೆಸಲಿದ್ದಾರೆ. ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಜನಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮೀಣ ಭಾಗದ ರೈತರಿಗಾಗಿ ಜಾರಿಗೆ ತಂದಿರುವ ಕಾರ್ಯಕ್ರಮಗಳ ಕೈಪಿಡಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.