ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಕಂಪ್ಲಿ-ಗಂಗಾವತಿ ಸೇತುವೆ ಸಂಚಾರ ನಿಷೇಧ

Lingaraj Badiger
Updated On : 30 Oct 2013, 12:21 pm

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಅ. 29
ಕಂಪ್ಲಿ- ಗಂಗಾವತಿ ತುಂಗಭದ್ರಾ ನದಿ ಸೇತುವೆ ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಧಿಕಾರಿಗಳು ಭಾರಿ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಂಪ್ಲಿ ವಾಲ್ಮೀಕಿ ವೃತ್ತ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ.
ಕಂಪ್ಲಿ-ಗಂಗಾವತಿ ತುಂಗಭದ್ರಾ ನದಿ ಸೇತುವೆ ಶಿಥಿಲಗೊಂಡಿದ್ದು, ಸೇತುವೆ ಮೇಲೆ ಭಾರಿ ವಾಹನಗಳ ಓಡಾಟ ನಿಷೇಧಿಸುವಂತೆ ಪ್ರಗತಿಪರ ಸಂಘಟನೆಗಳು ಹಲವಾರು ಬಾರಿ ಹೋರಾಟ ಹಮ್ಮಿಕೊಂಡ ಹಿನ್ನೆಲೆಯಲ್ಲಿ ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್, ಲೋಕೋಪಯೋಗಿ ಇಲಾಖೆ, ಆರ್‌ಟಿಓ ಅಧಿಕಾರಿಗಳು ಸಮನ್ವಯ ಸಾಧಿಸಿ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಕಂಪ್ಲಿ ಪಟ್ಟಣಕ್ಕೆ ಬರುವ ಕುಡುತಿನಿ ಹೊರವಲಯದಲ್ಲಿ ಪೊಲೀಸ್ ಕಾವಲು ಹಾಕಲಾಗಿದೆ. ಗಂಗಾವತಿಯಲ್ಲೂ ಪೊಲೀಸ್ ಕಾವಲು ಹಾಕಿದ್ದು, ತಕ್ಕ ಮಟ್ಟಿಗೆ ಭಾರಿ ವಾಹನಗಳ ಸಂಚಾರ ಸ್ಥಗಿತವಾಗಿದೆ. ಹಗಲು ಹೊತ್ತು ಮಾತ್ರ ಭಾರಿ ವಾಹನಗಳ ಓಡಾಟಕ್ಕೆ ಕೊಂಚ ಬ್ರೇಕ್ ಬಿದ್ದಿದ್ದರೂ, ಇಡೀ ರಾತ್ರಿ ಹಾಗೂ ಬೆಳಗಿನತನಕ ರಾಜಾರೋಷವಾಗಿ ಭಾರಿ ವಾಹನಗಳು ಓಡಾಡುತ್ತಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹಗಲು ಮತ್ತು ರಾತ್ರಿ ಸೇತುವೆ ಮೇಲೆ ಭಾರಿ ವಾಹನಗಳು ಸಂಚರಿಸಬಾರದು. ಸೇತುವೆ ಮೇಲೆ ಯಾವುದೇ ಕಾರಣಕ್ಕೂ ಭಾರಿ ವಾಹನಗಳ ಸಂಚರಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement