ಇಂದು ವಿವಾಹ
ಹೊಸಪೇಟೆ: ನಾಗರಿಕ ಹಿತರಕ್ಷಣಾ ಸೇವಾ ಸಂಘದಿಂದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಗರದ ಆರ್ಟಿಒ ಕಚೇರಿ ಸಮೀಪದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನ. 1ರಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ. ಕೊಟ್ಟೂರುಸ್ವಾಮಿ ಮಠದ ಸಂಗನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸಮ್ಮುಖದಲ್ಲಿ, ಅನ್ನಪೂರ್ಣೇಶ್ವರಿ ಮಠದ ರಾಜ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದೆ. ಸಂಸದೆ ಜೆ. ಶಾಂತಾ ಅಧ್ಯಕ್ಷತೆ ವಹಿಸುವರು. ರಾಣಿ ಸಂಯುಕ್ತ, ಪತ್ತಿಕೊಂಡ ಕಿಶೋರ್, ಪಂತರ್ ಜಯಂತ್, ಪ್ರಾಚಾರ್ಯ ಡಾ.ಕೆ. ಪನ್ನಂಗಧರ, ನಾಗರಿಕ ಹಿತರಕ್ಷಣಾ ಸೇವಾ ಸಂಘದ ಅಧ್ಯಕ್ಷ ಕಾಸೆಟ್ಟಿ ಉಮಾಪತಿ, ಆರ್. ಕೊಟ್ರೇಶ್, ಎಚ್. ಶ್ರೀನಿವಾಸ, ಜೆ.ಎನ್. ಗಣೇಶ್, ಬಿ.ಎಸ್. ಜಂಬಯ್ಯ ನಾಯಕ, ಕಣ್ಣಿ ಶ್ರೀಕಂಠ, ಗೋಸಲ ಮಂಜುನಾಥ, ದೇವರಮನಿ ಶ್ರೀನಿವಾಸ, ಜಂಬಾನಹಳ್ಳಿ ವಂಸತ, ಬೋಡಾ ರಾಮಪ್ಪ, ಪರಮೇಶ್ವರ ಗೌಡ ಭಾಗಹವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.