ಮಟ್ಕಾ ಅಡ್ಡೆ ಮೇಲೆ ದಾಳಿ: ಇಬ್ಬರ ಬಂಧನ
ಬಳ್ಳಾರಿ: ಮಟ್ಕಾ ಜೂಜಾಟ ಅಡ್ಡೆ ಮೇಲೆ ಕುಡಿತಿನಿ ಪೊಲೀಸರು ದಾಳಿ ಮಾಡಿ, ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ರು. 2100 ವಶಪಡಿಸಿಕೊಂಡಿದ್ದಾರೆ. ಗುರುವಾರ ಬೆಳಗ್ಗೆ ಠಾಣೆಯ ವ್ಯಾಪ್ತಿಯ ಹೊಸ ದರೋಜಿ ಗ್ರಾಮದಲ್ಲಿ ಮಟ್ಕಾ ಜೂಜಾಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕುಡಿತಿನಿ ಪಿಎಸ್ಐ ವಾಸುಕುಮಾರ್ ನೇತೃತ್ವದಲ್ಲಿ ದಾಳಿ ಮಾಡಿ, ನರೇಶ್ಕುಮಾರ್, ಮಂಜುನಾಥ್ ಎನ್ನುವವರನ್ನು ಬಂಧಿಸಲಾಗಿದೆ. ಕುಡಿತಿನಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.