ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಶಿಕ್ಷಕ ವೃತ್ತಿ ಎಲ್ಲಕ್ಕಿಂತ ಶ್ರೇಷ್ಠ: ಡಾ. ಘಂಟಿ

Vishwanath S
Updated On : 6 Sept 2013, 11:02 am

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಸೆ. 5
ಸಮಾಜದಲ್ಲಿ ಎಲ್ಲ ವೃತ್ತಿಗಿಂತ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ಮತ್ತು ಶ್ರೇಷ್ಠವಾದ ವೃತ್ತಿಯಾಗಿದೆ ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ. ಮಲ್ಲಿಕಾ ಘಂಟಿ ಹೇಳಿದರು.
ನಗರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿ, ಮಕ್ಕಳು ಹೆಚ್ಚಿನ ಅಂಕ ಪಡೆಯಬೇಕು ಎಂದು ತಂದೆ ತಾಯಿಗಳು ಹಾಗೂ ಶಿಕ್ಷಕರು ಮಕ್ಕಳ ಮೇಲೆ ಸಾಕಷ್ಟು ಒತ್ತಡ ಹೇರುತ್ತಿರುವುದು, ಕೆಲ ವಿದ್ಯಾರ್ಥಿಗಳು ರ್ಯಾಂಕ್ ಪಡೆಯಬೇಕೆಂದು ಬಿಸಿಲುಗುದುರೆ ಬೆನ್ನೇರಿ ಹೊರಟಿದ್ದಾರೆ. ಕೇವಲ ಹೆಚ್ಚು ಅಂಕ ಪಡೆಯುವ ಉದ್ದೇಶ ಹೊಂದಿರುವ ವಿದ್ಯಾರ್ಥಿಗಳಿಗೆ ಬದುಕಿನ ಭರವಸೆಗಳನ್ನು ಶಿಕ್ಷಣದ ಮೂಲಕ ತಿಳಿಸಿಕೊಡದೇ ಇರುವುದರಿಂದ ಇಂದಿನ ಎಷ್ಟೋ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವುದು ದುರಂತದ ಸಂಗತಿ ಎಂದರು.
ಮರಿಯಮ್ಮನಹಳ್ಳಿಯ ಗುರುಪಾದ ದೇವರ ಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಹಸೀಲ್ದಾರ್ ರಮೇಶ್ ಕೋನರಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಎಲ್.ಡಿ. ಜೋಷಿ, ಬಿಇಒ ಪಿ. ಸುನಂದಾ, ಬಿಆರ್‌ಸಿ ಸಮನ್ವಯಾಧಿಕಾರಿ ಶರಣಪ್ಪ ವಟಗಲ್, ತಾಪಂ ಸದಸ್ಯ ಭೀಮಾನಾಯ್ಕ, ಅಶೋಕ್ ಜೀರೆ, ಗೋವಿಂದ ಕುಲಕರ್ಣಿ, ಕಳ್ಳಿಮನೆ ಉಮೇಶಪ್ಪ, ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಡಿ. ಲಾಲ್ಯಾನಾಯ್ಕ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ಮಾರುಗದಪ್ಪ, ತಾಪಂ ಪ್ರಭಾರಿ ಇಒ ಎಸ್.ಎಚ್. ಶರಣಬಸಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುಬಸವರಾಜ, ಕಾರ್ಯದರ್ಶಿ ಬಸವರಾಜ, ಡಿ. ವೆಂಕಟೇಶ್, ಪದ್ಮನಾಭ ಕರ್ಣಂ, ಬಿ. ಅಂಬಣ್ಣ, ಬಸವರಾಜ, ಬಿ.ಕೆ. ವೆಂಕಟೇಶ್ ರೆಡ್ಡಿ, ಶೇಖರಪ್ಪ ಹೊರಪೇಟೆ, ಕೆ. ಚಂದ್ರಪ್ಪ, ಡಿ. ಖಾಸಿಂಸಾಬ್, ಬಿ. ದೇವದಾಸ, ಕಸಿಟ್ಟ ಉಮಾಪತಿ ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಶಿಕ್ಷಕ ನವೀನ್‌ಕುಮಾರ್ ರಚಿತ ಅಂತರ್ಮುಖಿ ಕಾದಂಬರಿಯನ್ನು ಬಿಡುಗಡೆಗೊಳಿಸಲಾಯಿತು. ಸಮಾರಂಭದ ಕೊನೆಯಲ್ಲಿ ಹಡಗಲಿಯ ಪ್ರಕಾಶ್ ಜೈನ್ ಮತ್ತು ಸಂಗಡಿಗರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement