ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಯುವಕನಿಂದ ಮಹಿಳೆ ಮೇಲೆ ಅತ್ಯಾಚಾರ

Mainashree
Updated On : 7 Sept 2013, 11:23 am

ಬಳ್ಳಾರಿ: ಮಲಗಿದ್ದ ಮಹಿಳೆಯೊಬ್ಬಳ ಮೇಲೆ 24 ವರ್ಷದ ಯುವಕ ಅತ್ಯಾಚಾರ ಎಸಗಿರುವ ಘಟನೆ ಸಿರುಗುಪ್ಪ ತಾಲೂಕಿನ ಆಗಲೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಪತಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ದರೂರು ಜಾತ್ರೆ ನಿಮಿತ್ತ ದಂಪತಿ ಆಗಲೂರಿಗೆ ಆಗಮಿಸಿದ್ದರು. ಗಂಡ ನಿತ್ಯ ಕುಡಿಯುತ್ತಿದ್ದ. ಅದರಂತೆ ಕುಡಿದುಕೊಂಡು ಬಂದು ರಾತ್ರಿ ಹೆಂಡತಿಯೊಂದಿಗೆ ಹೊರಗೆ ಮಲಗಿದ್ದಾಗ, ಎದುರುಗಡೆ ಮನೆಯ ಪಾಲ್ಗುಣ ಎನ್ನುವ ಯುವಕ ರಾತ್ರಿ 11 ಗಂಟೆ ಸುಮಾರಿಗೆ ಆಕೆಯ ಸೀರೆಯನ್ನು ಬಾಯಿಗೆ ತುರುಕಿ, ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಡಿವೈಎಸ್ಪಿ ರುದ್ರಮುನಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಬಂಧನಕ್ಕೆ ತಂಡ ರಚನೆ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement