ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಕಾಮಗಾರಿಗಳ ಪ್ರಗತಿ ಪರಿಶೀಲನೆ

Rashmi Kasaragodu
Updated On : 9 Sept 2013, 12:41 pm

ಬಳ್ಳಾರಿ: ತಾಲೂಕಿನ ವಿವಿಧ ಗ್ರಾಮಗಳಿಗೆ ಬಳ್ಳಾರಿ ಗ್ರಾಮೀಣ ಶಾಸಕ ಶಾಸಕ ಬಿ. ಶ್ರೀರಾಮುಲು ಭೇಟಿ ನೀಡಿ ಪ್ರಗತಿಯಲ್ಲಿರುವ ಕಾಮಗಾರಿಗಳ ಪರಿಶೀಲನೆ ಹಾಗೂ ನೂತನ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ತಾಲೂಕಿನ ಮೋಕಾ ಫಿರ್ಕಾದ ವ್ಯಾಪ್ತಿಯ ಮೋಕಾ, ಹೊಸ ಮೋಕಾ, ಎರ್ರಗುಡಿ, ಬೆಣಕಲ್ಲು, ಸಿಂಧವಾಳ, ಜಾಲಿಹಾಳ ಮತ್ತು ಬೊಮ್ಮನಾಳು ಇನ್ನಿತರೆ ಗ್ರಾಮಗಳಿಗೆ ತೆರಳಿದ ಶಾಸಕರು, ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲಿಸಿದರು ಹಾಗೂ ನೂತನ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಂತರ ಸರ್ವ ಶಿಕ್ಷಣ ಅಭಿಯಾನದಡಿ ರು. 2 ಕೋಟಿ ವೆಚ್ಚದ ಪ್ರೌಢಶಾಲೆ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಭೂಮಿಪೂಜೆ ನೆರವೇರಿಸಿದರು.
ಬಳಿಕ ಪ್ರಾಥಮಿಕ ಆರೋಗ್ಯ ಕೇಂದ್ರದ ಹೊಸ ಕಟ್ಟಡ ವೀಕ್ಷಿಸಿ, ಹೊಸ ಎರ್ರಗುಡಿಯಲ್ಲಿ ಕೆಇಬಿ ಉಪಕೇಂದ್ರದ ಉದ್ಘಾಟನೆ ನೆರವೇರಿಸಿದರು. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರ, ಮೊರಾರ್ಜಿ ದೇಸಾಯಿ ವಸತಿ ಶಾಲೆ ವೀಕ್ಷಿಸಿದರು. ಬೆಣಕಲ್ಲು ಗ್ರಾಮಕ್ಕೆ ಭೇಟಿ ನೀಡಿದ ಬಳಿಕ, ಸಿಂಧುವಾಳ ಗ್ರಾಮದಲ್ಲಿ ಸಮುದಾಯ ಭವನ, ಸರ್ಕಾರಿ ಪ್ರೌಢಶಾಲೆ ಕಟ್ಟಡ ಉದ್ಘಾಟಿಸಿದರು. ಹೊಸದಾಗಿ ನಿರ್ಮಿಸಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೀಕ್ಷಣೆ ಮಾಡಿದರು. ಸುವರ್ಣ ಗ್ರಾಮ ಯೋಜನೆಯಡಿ ರು. 1 ಕೋಟಿ ವೆಚ್ಚದಲ್ಲಿ ಜಾಲಿಹಾಳ ಗ್ರಾಮದ ಕಾಮಗಾರಿ ವೀಕ್ಷಿಸಿದ ಅವರು, ಬೊಮ್ಮನಾಳು ಗ್ರಾಮದಲ್ಲಿ ರು. 10 ಲಕ್ಷ ವೆಚ್ಚದ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿದರು. ಬಳ್ಳಾರಿಯಿಂದ ಆಂಧ್ರಪ್ರದೇಶದವರೆಗೆ ರು. 158 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆಯನ್ನು ಪರಿಶೀಲಿಸಿದರು.
ಬಿಎಸ್ಸಾರ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್. ಗುರುಲಿಂಗನಗೌಡ, ಜಿಪಂ ಸದಸ್ಯರಾದ ಡಿ. ರಾಮುಡು, ರಾಜಶೇಖರ, ಎಪಿಎಂಸಿ ಅಧ್ಯಕ್ಷ ವೀರೇಶಗೌಡ, ತಾಪಂ ಅಧ್ಯಕ್ಷ ವಿ. ಗಾದಿಲಿಂಗಪ್ಪ, ಮುಖಂಡರಾದ ನಾಗಭೂಷಣಗೌಡ, ಓಬಳೇಶ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement