ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಮಾಧ್ಯಮದವರಿಗೆ ಮೂಲಸೌಕರ್ಯ ನೀಡಿ

Rashmi Kasaragodu
Updated On : 9 Sept 2013, 12:41 pm

ಬಳ್ಳಾರಿ: ರಾಜ್ಯ ಸರ್ಕಾರವು ಸುದ್ದಿ, ಮಾಧ್ಯಮಗಳ ಪ್ರತಿನಿಧಿಗಳಿಗೆ ಮೂಲಸೌಕರ್ಯ ಒದಗಿಸಬೇಕು ಎಂದು ಅಖಿಲ ಭಾರತ ಜನಗಣ ಒಕ್ಕೂಟದ ರಾಷ್ಟ್ರೀಯ ಸಂಚಾಲಕ ಜಿ. ಗಂಗಿರೆಡ್ಡಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 10 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸುದ್ದಿ, ಮಾಧ್ಯಮಗಳ ಮಿತ್ರರಿಗೆ ಉಚಿತ ನಿವೇಶನ ನೀಡಬೇಕು. ಸರ್ಕಾರದಿಂದ ಮಾಸಾಶನ ನೀಡಬೇಕು. ಬಿಪಿಎಲ್ ಪಡಿತರ ಚೀಟಿ, ವಿಮಾ ಸೌಲಭ್ಯ ಕಲ್ಪಿಸಬೇಕು ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯಕೀಯ ಸೇವೆ ಕಲ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಸಮಾಜದಲ್ಲಿ ಪ್ರತಿನಿತ್ಯವೂ ನಡೆಯುವ ಘಟನೆಗಳನ್ನು ಜನರಿಗೆ ತಿಳಿಸಿ, ಸಮಾಜವನ್ನು ಸದಾ ಜಾಗೃತಗೊಳಿಸುವಲ್ಲಿ ಪತ್ರಕರ್ತರ, ಮಾಧ್ಯಮದವರ ಪಾತ್ರ ಅತ್ಯಂತ ಗಣನೀಯ. ಈ ನಿಟ್ಟಿನಲ್ಲಿ ಸುದ್ದಿ, ಮಾಧ್ಯಮದವರಿಗೆ ರಕ್ಷಣೆ ಹಾಗೂ ಮೂಲಸೌಕರ್ಯ ಒದಗಿಸಲು ರಾಜ್ಯ ಸರ್ಕಾರವು ಮುಂದಾಗಬೇಕು ಎಂದ ಅವರು, ಈ ಬಗ್ಗೆ ಜಿಲ್ಲಾ ವಾರ್ತಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರದ ವಾರ್ತಾ ಸಚಿವರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.
ಪ್ರತ್ಯೇಕ ರಾಜ್ಯದ ಬೇಡಿಕೆ: ರಾಜ್ಯದ ಬೀದರ್, ಗುಲ್ಬರ್ಗಾ, ಬಿಜಾಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ ಸೇರಿದಂತೆ ಒಟ್ಟು 11 ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯ ರಚನೆ ಮಾಡಬೇಕು. ಈ  ಜಿಲ್ಲೆಗಳು ಕೃಷಿ, ಉದ್ಯೋಗ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅತ್ಯಂತ ಹಿಂದುಳಿದಿದ್ದು, ಇವುಗಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement