ಸುನೀಲ್ಕುಮಾರ್ ಸಹಾಯಕ ಆಯುಕ್ತ
ಹೊಸಪೇಟೆ: ಹೊಸಪೇಟೆ ನೂತನ ಸಹಾಯಕ ಆಯುಕ್ತರಾಗಿ ಪಿ. ಸುನೀಲ್ಕುಮಾರ್ ಅಧಿಕಾರ ಸ್ವೀಕರಿಸಿದರು. ಸಹಾಯಕ ಆಯುಕ್ತರಾಗಿ ಇದುವರೆಗೆ ಸೇವೆ ಸಲ್ಲಿಸಿದ್ದ ಡಾ.ಡಿ.ಆರ್. ಅಶೋಕ್ ಅವರು ವರ್ಗಾವಣೆಯಾದ ಹಿನ್ನಲೆಯಲ್ಲಿ ಪಿ. ಸುನೀಲ್ಕುಮಾರ್ ಅವರು ಅಧಿಕಾರ ವಹಿಸಿಕೊಂಡರು.
ಸುನೀಲ್ ಕುಮಾರ್ ಅವರು ಮೂಲತಃ ಆಂಧ್ರಪ್ರದೇಶದ ಕಡಪ ಜಿಲ್ಲೆಯವರಾಗಿದ್ದು, 2011ರ ಬ್ಯಾಚ್ನ ಐಎಎಸ್ ಅಧಿಕಾರಿ. ಅಧಿಕಾರ ಸ್ವೀಕರಿಸಿ ಮಾತನಾಡಿದ ಸುನೀಲ್ ಕುಮಾರ್, ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಶೀಘ್ರವೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವೆ ಎಂದರು. ಇದೇ ಸಂದರ್ಭದಲ್ಲಿ ನಿರ್ಗಮಿತ ಸಹಾಯಕ ಆಯುಕ್ತ ಡಾ. ಡಿ.ಆರ್. ಅಶೋಕ್ ಅವರಿಗೆ ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿ ಸನ್ಮಾನಿಸಿ ಬೀಳ್ಕೊಟ್ಟರು.