ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗೆ ಮನವಿ
ಹೊಸಪೇಟೆ: ಕಾಂಗ್ರೆಸ್ ಅಭ್ಯರ್ಥಿಗಳು ಪರಾಜಿತ ಜಿಲ್ಲೆಯ 5 ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ವಿಜಯನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಚ್. ಅಬ್ದುಲ್ ವಹಾಬ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಮುಖಂಡರು ಮನವಿಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳು ಸೋತ ಜಿಲ್ಲೆಯ ಕ್ಷೇತ್ರಕ್ಕೆ ವಿಶೇಷ ಅನುದಾನ ಬಿಡುಗಡೆಗೊಳಿಸುವ ಮೂಲಕ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪರ ವಾತಾವರಣ ನಿರ್ಮಿಸಲು ಹಾಗೂ ಕಾರ್ಯಕರ್ತರನ್ನು ಪಕ್ಷ ಸಂಘಟನೆಗೆ ಪ್ರೋತ್ಸಾಹಿಸಲು ಹೆಚ್ಚಿನ ಅನುದಾನ ನೀಡಬೇಕು ಎಂದು ಆಗ್ರಹಿಸಲಾಯಿತು. ನಿಯೋಗದಲ್ಲಿ ಹೊಸಪೇಟೆಯ ಎಚ್. ಅಬ್ದುಲ್ ವಹಾಬ್, ಕಂಪ್ಲಿ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಗುಜ್ಜಲ್ ನಾಗರಾಜ್, ಹಗರಿಬೊಮ್ಮನಹಳ್ಳಿ ಕ್ಷೇತ್ರದ ಎಲ್. ಮಾರೆಣ್ಣ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಅಸುಂಡಿ ಹೊನ್ನೂರಪ್ಪ, ಕೂಡ್ಲಿಗಿ ಕ್ಷೇತ್ರದ ಎಸ್. ವೆಂಕಟೇಶ್ ಇದ್ದರು ಎಂದು ಕಂಪ್ಲಿ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಗುಜ್ಜಲ ನಾಗರಾಜ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.