ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಇಸ್ಪೀಟ್ ಅಡ್ಡೆ ಮೇಲೆ ದಾಳಿ

Lingaraj Badiger
Updated On : 13 Sept 2013, 11:32 am

ಬಳ್ಳಾರಿ: ಅಂದರ್ ಬಾಹರ್ ಇಸ್ಪೀಟ್ ಆಡುತ್ತಿದ್ದ ಅಡ್ಡೆ ಮೇಲೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಠಾಣೆ ಪೊಲೀಸರು ದಾಳಿ ಮಾಡಿ, ರು. 10,570 ವಶಪಡಿಸಿಕೊಂಡಿರುವ ಘಟನೆ ಹಗರಿಬೊಮ್ಮನಹಳ್ಳಿ ಪಟ್ಟಣದ ನೆಹರು ನಗರದಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ, ನೆಹರು ಕಾಲೋನಿಯ ಗಣೇಶ ಮೂರ್ತಿ ಕೂಡಿಸಿದ ಸಮೀಪದಲ್ಲಿ ಆಡುತ್ತಿದ್ದ ಆರೋಪಿತರಿಂದ ರು. 10,570 ವಶಪಡಿಸಿಕೊಂಡಿದ್ದಾರೆ. ಈ ಕುರಿತು ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಟ್ಕಾ: 7 ಜನರ ಬಂಧನ
ಬಳ್ಳಾರಿ: ಮುಂಡ್ರಿಗಿಯಿಂದ ಮಿಂಚೇರಿ ಗ್ರಾಮಕ್ಕೆ ಹೋಗುವ ರಸ್ತೆಯ ಎಚ್‌ಎಲ್ ಕಾಲುವೆ ಸಮೀಪದಲ್ಲಿ ನಡೆಯುತ್ತಿದ್ದ ಮಟ್ಕಾ ಜೂಜಾಟದ ಅಡ್ಡೆ ಮೇಲೆ ಗ್ರಾಮೀಣ ಠಾಣೆ ಪೊಲೀಸರು ದಾಳಿ ಮಾಡಿ, 7 ಜನರನ್ನು ಬಂಧಿಸಿ, ಬಂಧಿತರಿಂದ ರು. 7940 ವಶಪಡಿಸಿಕೊಂಡಿದ್ದಾರೆ. ಬುಧವಾರ ಸಂಜೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಸುರೇಶ್ ರೆಡ್ಡಿ ಸೇರಿದಂತೆ 7 ಜನರನ್ನು ಬಂಧಿಸಿದ್ದಾರೆ. ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement