ಓಟದ ಸ್ಪರ್ಧೆ: ಜಿಲ್ಲಾ ಮಟ್ಟಕ್ಕೆ ಆಯ್ಕೆ
ಹಗರಿಬೊಮ್ಮನಹಳ್ಳಿ: ತಾಲೂಕಿನ ವಲ್ಲಭಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ರೀಡಾಂಗಣದಲ್ಲಿ ನಡೆದ 2013-14ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಸೊನ್ನ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಹಿರೇಗೌಡ್ರು ಕಾವೇರಿ 1500 ಮೀ, 3000 ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಶಾಲೆ ಮುಖ್ಯೋಪಾಧ್ಯಾಯ ಎಚ್.ಎಸ್. ವೀರೇಶ್, ಎಸ್ಡಿಎಂಸಿ ಅಧ್ಯಕ್ಷ ತಂಬ್ರಹಳ್ಳಿ ಸೋಮಣ್ಣ, ದೈಹಿಕ ಶಿಕ್ಷಣ ಶಿಕ್ಷಕ ಚಕ್ರಸಾಲಿ ಕೊಟ್ರೇಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಸ್. ಸಿದ್ದಲಿಂಗಪ್ಪ ಸೇರಿದಂತೆ ಹಲವರು ಅಭಿನಂದಿಸಿದ್ದಾರೆ.
--