ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಸೃಜನಶೀಲತೆ ಬೆಳೆಯಲು ಪ್ರೋತ್ಸಾಹ ಅಗತ್ಯ: ಉಪಾಧ್ಯ

Lingaraj Badiger
Updated On : 16 Sept 2013, 11:32 am

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಸೆ. 15
ಮಕ್ಕಳಲ್ಲಿ ಸೃಜನಶೀಲತೆ ಬೆಳೆಯಲು ಪೋಷಕರ ಪ್ರೋತ್ಸಾಹ ಅತ್ಯಗತ್ಯ ಎಂದು ಪಶು ತಜ್ಞ ವೈದ್ಯ ಮಂಗಳೂರಿನ ಡಾ. ಮನೋಹರ ಉಪಾಧ್ಯ ಅಭಿಪ್ರಾಯಪಟ್ಟರು.
ಬಳ್ಳಾರಿಯ ಸಂಸ್ಕೃತಿ ಪ್ರಕಾಶನ ಕರ್ನಾಟಕ ಜಾನಪದ ಪರಿಷತ್ ತಾಲೂಕು ಘಟಕ ಮತ್ತು ಡಾ. ಸುಭಾಷ್ ಭರಣಿ ಸಾಂಸ್ಕೃತಿಕ ವೇದಿಕೆ ಸಹಯೋಗದಲ್ಲಿ ಗುರುವಾರ ನಗರದಲ್ಲಿ ಆಯೋಜಿಸಿದ್ದ ಸಾಹಿತಿ ಡಾ. ಅಶ್ವತ್ಥ್ ಕುಮಾರ್ ಅವರ ಭಾವನಾತ್ಮಕ ಬದುಕು ಕೃತಿ ಕುರಿತು ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿರುವ ಅಡಗಿರುವ ಪ್ರತಿಭೆ, ಉತ್ತಮ ಹವ್ಯಾಸಗಳನ್ನು ಗುರುತಿಸಿ ಪ್ರೋತ್ಸಾಹ ನೀಡಿದರೆ ಭವಿಷ್ಯದಲ್ಲಿ ಸಮಾಜ ಹೆಮ್ಮೆಪಡುವಂತೆ ಸಾಧಕರಾಗಿ ರೂಪಗೊಳ್ಳುತ್ತಾರೆ ಎಂದರು.
ಸಾಕು ಪ್ರಾಣಿಗಳ ಜತೆಗಿನ ಒಡನಾಟದಿಂದ ಖಿನ್ನತೆ ದೂರವಾಗುತ್ತದೆ. ಪ್ರಾಣಿಗಳೊಂದಿಗೆ ಒಡನಾಟವನ್ನಿಟ್ಟುಕೊಂಡು ಪ್ರೀತಿಸಿದರೆ ಅದರಿಂದ ಸಿಗುವ ಅನುಭವವೇ ಬೇರೆ ಎಂದು ತಿಳಿಸಿದರು. ಭಾವನಾತ್ಮಕ ಬದುಕು ಕೃತಿಯು ವಿದ್ಯಾರ್ಥಿ ಸಮುದಾಯ ಸೇರಿದಂತೆ ಎಲ್ಲರಿಗೂ ಉಪಯುಕ್ತ ಕೃತಿಯಾಗಿದೆ ಎಂದರು.
ಸಿರುಗುಪ್ಪದ ಶಸ್ತ್ರ ಚಿಕಿತ್ಸಕ ಡಾ. ಮಧುಸೂದನ ಕಾರಿಗನೂರು, ಪಶುಪಾಲನ ಮತ್ತು ಪಶು ವೈದ್ಯಸೇವಾ ಇಲಾಖೆಯ ಬಳ್ಳಾರಿ ಜಿಲ್ಲಾ ಉಪ ನಿರ್ದೇಶಕ ಡಾ. ಜೆ ಎಸ್ ಪಂಪಾಪತಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಕಾಶಕ ಸಿ ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಶು ವೈದ್ಯ ಟಿ. ಶಶಿಧರ, ಲೇಖಕ ಡಾ. ಜೆ. ಎಸ್.ಅಶ್ವತ್ಥ್ ಕುಮಾರ್  ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ. ಮನೋಹರ ಉಪಾಧ್ಯ ಅವರನ್ನು ಸಂಸ್ಕೃತಿ ಪ್ರಕಾಶನದಿಂದ ಗೌರವಿಸಿ, ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪಶುಪಾಲನ ಮತ್ತು ಪಶು ವೈದ್ಯಸೇವಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಾ. ಟಿ. ಮರಿ ಬಸವನಗೌಡ, ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ ನಾಗರಾಜ್ ಉಪಸ್ಥಿತರಿದ್ದರು.
ಜಿಲ್ಲೆಯ ಪಶು ವೈದ್ಯರು, ಪಶುವೈದ್ಯಕೀಯ ಸಹಾಯಕರು ಸಂವಾದದಲ್ಲಿ ಪಾಲ್ಗೊಂಡಿದ್ದರು. ಬಿ. ಚಂದ್ರಶೇಖರ ಆಚಾರ ಸ್ವಾಗತಿಸಿದರು. ಕರ್ನಾಟಕ ಜಾನಪದ ಪರಿಷತ್ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಹಂದ್ಯಾಳ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement