ಹೈಕ ವಿಮೋಚನಾ ದಿನಾಚರಣೆ ಇಂದು
ಬಳ್ಳಾರಿ: ಜಿಲ್ಲಾಡಳಿತದ ವತಿಯಿಂದ ಸೆ. 17ರಂದು ಬೆಳಗ್ಗೆ 10.30 ಗಂಟೆಗೆ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಅನಿಲ್ ಲಾಡ್ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೆಂಡಿಗೇರಿ ಶೋಭಾ, ಸಂಸದೆ ಜೆ. ಶಾಂತಾ, ಕೊಪ್ಪಳ ಸಂಸದ ಶಿವರಾಮಗೌಡ, ಶಾಸಕರಾದ ಬಿ. ಶ್ರೀರಾಮುಲು, ಆನಂದ್ ಸಿಂಗ್, ಟಿ.ಎಚ್. ಸುರೇಶ್ಬಾಬು, ಈ. ತುಕಾರಾಂ, ಬಿ. ನಾಗೇಂದ್ರ, ಭೀಮಾನಾಯ್ಕ, ಬಿ.ಎಂ. ನಾಗರಾಜ, ವಿಧಾನಪರಿಷತ್ ಸದಸ್ಯ ಮೃತ್ಯುಂಜಯ ಜಿನಗಾ, ಅಮರನಾಥ ಪಾಟೀಲ್ ಆಗಮಿಸಲಿದ್ದಾರೆ.
ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಪಂ ಸಿಇಒ ಮಂಜುನಾಥ್ ನಾಯಕ್, ಎಸ್ಪಿ ಡಾ. ಚೇತನ್ಸಿಂಗ್ ರಾಥೋಡ್ ಮತ್ತಿತರರು ಉಪಸ್ಥಿತರಿರುತ್ತಾರೆ. ದಿನಾಚರಣೆ ಅಂಗವಾಗಿ ದೇಶಭಕ್ತಿ ಗೀತೆ ಗಾಯನ, ಸಮೂಹ ನೃತ್ಯ, ಜಾನಪದ ನೃತ್ಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.