ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಶಾಸಕ ಸುರೇಶ್‌ಬಾಬು ಕ್ಷೇತ್ರದಲ್ಲಿ ಬಿಗಿ ಭದ್ರತೆ

Srinivasa Murthy VN
Updated On : 20 Sept 2013, 12:57 pm

ಬಳ್ಳಾರಿ: ಕಂಪ್ಲಿ ಶಾಸಕ ಸುರೇಶ್‌ಬಾಬು ಅವರನ್ನು ಬಂಧಿಸಿರುವ ಹಿನ್ನೆಲೆಯಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರ, ಬಳ್ಳಾರಿ ನಗರದಲ್ಲಿ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಲಾಗಿದೆ.
2011 ಸೆ.5ರಂದು ಜನಾರ್ದನ ರೆಡ್ಡಿ ಅವರನ್ನು ಬಂಧಿಸಿದ ಸಂದರ್ಭದಲ್ಲಿ ಅವರ ಅಭಿಮಾನಿಗಳು ಬಳ್ಳಾರಿ ಬಂದ್‌ಗೆ ಕರೆ ನೀಡಿದ್ದು, ಕೆಲವೊಂದು ಸರ್ಕಾರಿ ಕಚೇರಿಗೆ ನುಗ್ಗಿದ ಕೆಲವು ಕಿಡಿಗೇಡಿಗಳು ಕಂಪ್ಯೂಟರ್‌ಗಳನ್ನು ಧ್ವಂಸಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಬಳ್ಳಾರಿ ಪೊಲೀಸ್ ಇಲಾಖೆಯು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಇನ್ನಿತರ ಶಾಸಕರಿಗೆ ಬಂಧನದ ಭೀತಿ
ಬೇಲೆಕೇರಿ ಅದಿರು ಪ್ರಕರಣದಲ್ಲಿ ಇನ್ನು 2-3 ಶಾಸಕರ ಹೆಸರುಗಳು ಕೇಳಿ ಬರುತ್ತಿರುವುದರಿಂದ, ಬಳ್ಳಾರಿ ಜಿಲ್ಲೆಯ ಇಬ್ಬರು ಶಾಸಕರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಒಬ್ಬ ಶಾಸಕರಿಗೆ ಬಂಧನದ ಭೀತಿ ಎದುರಾಗಿದೆ. ಅವರನ್ನು ಯಾವುದೇ ಕ್ಷಣದಲ್ಲಿಯೂ ಸಿಬಿಐ ಅಧಿಕಾರಿಗಳು ಬಂಧಿಸಿದರೂ ಆಶ್ಚರ್ಯ ಪಡಬೇಕಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement