ಆಂಗ್ಲಭಾಷೆಯಿಂದ ಉದ್ಯೋಗಾವಕಾಶ
ಕುರುಗೋಡು: ಮಾತೃ ಭಾಷೆ ಜತೆಗೆ ಆಂಗ್ಲ ಭಾಷೆ ಕಲಿಯುವುದರಿಂದ ಜಗತ್ತಿನ ವಿವಿಧ ಕಡೆಗಳಲ್ಲಿ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಳ್ಳಬಹುದು ಎಂದು ಆಂಗ್ಲಭಾಷಾ ಸಹಾಯಕ ಪ್ರಾಧ್ಯಾಪಕ ಟಿ. ಮರಿಗಾದಿಲಿಂಗಪ್ಪ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ನಡೆದ 'ಹೊಸಹೆಜ್ಜೆ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಭಾಷೆಯ ಮಹತ್ವ ಕುರಿತು ತಿಳಿಸಿದರು.
ಕಾಲೇಜಿನ ಪ್ರಾಚಾರ್ಯ ಜಿ.ಆರ್. ವೆಂಕಟೇಶುಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಭಾಷೆಯ ಅವಶ್ಯಕತೆ ಇದ್ದು, ಪ್ರತಿಯೊಬ್ಬರೂ ಕಲಿಯಲೇಬೇಕು ಎಂದು ಸಲಹೆ ಮಾಡಿದರು.
ಈ ಸಂದರ್ಭ ಕಾಲೇಜಿನ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಚ್.ಆರ್. ದೇವರಾಜಯ್ಯ ಸ್ವಾಗತಿಸಿದರು. ವಿದ್ಯಾರ್ಥಿನಿ ಶಾರೂನ್ ಜಿ. ವಂದಿಸಿದರು.