ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಇಂದು ಕ್ರೀಡಾಕೂಟ

Lingaraj Badiger
Updated On : 21 Sept 2013, 11:59 am

ಬಳ್ಳಾರಿ: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಸೆ. 21ರಂದು ಹಡಗಲಿ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ದಸರಾ ಮತ್ತು ಮಹಿಳಾ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ತಿಳಿಸಿದ್ದಾರೆ. ಈಗಾಗಲೇ ತಾಲೂಕು ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ವೈಯಕ್ತಿಕ ಕ್ರೀಡೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿದ ಮತ್ತು ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ಕ್ರೀಡಾಪಟುಗಳು ಭಾಗವಹಿಸಬಹುದಾಗಿದೆ.  ಆಸಕ್ತರು ಸೆ. 21ರಂದು ಬೆಳಗ್ಗೆ 9 ಗಂಟೆಗೆ ಹೂವಿನಹಡಗಲಿಯ ತಾಲೂಕು ಕ್ರಿಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು. ಕ್ರೀಡಾಕೂಟದಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ಅಥ್ಲೆಟಿಕ್ಸ್, ಖೋ ಖೋ, ಕಬಡ್ಡಿ, ವಾಲಿಬಾಲ್, ಥ್ರೋಬಾಲ್, ಬ್ಯಾಡ್‌ಮಿಂಟನ್, ಬಾಲ್ ಬ್ಯಾಡ್‌ಮಿಂಟನ್, ಟೇಬಲ್ ಟೆನ್ನಿಸ್ ಮತ್ತಿತರ ಕ್ರೀಡೆಗಳಲ್ಲಿ ಸ್ಪರ್ಧೆ ಏರ್ಪಡಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ಹೂವಿನಹಡಗಲಿ ತಾಲೂಕು ಕ್ರೀಡಾಧಿಕಾರಿ (99160099324) ಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
24ರಂದು ತುಲಾಭಾರ
ಹೂವಿನಹಡಗಲಿ: ತಾಲೂಕು ವಾಲ್ಮೀಕಿ ಸಮಾಜ ಬಾಂಧವರಿಂದ ವಾಲ್ಮೀಕಿ ಗುರುಪೀಠ ಪ್ರಸನ್ನಾನಂದ ಸ್ವಾಮೀಜಿಗೆ ತುಲಾಭಾರ ಮತ್ತು ಸಚಿವರು ಹಾಗೂ ಶಾಸಕರಿಗೆ ಸನ್ಮಾನ ಸಮಾರಂಭವನ್ನು ಸೆ. 24ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಅಧ್ಯಕ್ಷ ಎಲ್.ಜಿ. ಹೊನ್ನಪ್ಪನವರ ತಿಳಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ, ಹರಪನಹಳ್ಳಿ ಶಾಸಕ ಎಂ.ಪಿ. ರವೀಂದ್ರ ಹಾಗೂ ಅಬಕಾರಿ ಸಚಿವ ಸತೀಶ ಜಾರಕಿಹೊಳಿ ಇವರಿಗೆ ಸಮಾಜದ ವತಿಯಿಂದ ಸನ್ಮಾನ ಸಮಾರಂಭ ಪಟ್ಟಣದ ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದರು. ಕಾರ್ಯಕ್ರಮದ ಸಾನ್ನಿಧ್ಯವನ್ನು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಮತ್ತು ಶಾಖಾ ಗವಿಮಠದ ಹಿರಿಶಾಂತವೀರ ಸ್ವಾಮೀಜಿ ವಹಿಸಲಿದ್ದಾರೆ. ತಾಲೂಕು ಅಧ್ಯಕ್ಷ ಎಲ್.ಜಿ. ಹೊನ್ನಪ್ಪನವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿ.ವಿ ಕುಲಸಚಿವ ಡಾ೤ ರಂಗರಾಜ ವನದುರ್ಗ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ಇದೇ ಸಂದರ್ಭ ನೂತನ ಪುರಸಬೆ ಸದಸ್ಯರಾದ ಯು. ಹನುಮಂತಪ್ಪ, ಯು. ಲಲಿತಮ್ಮ, ತಾಲೂಕು ನೌಕರರ ಸಂಘದ ನಿರ್ದೇಶಕರಾದ ಸಿ.ಸಿ. ಪ್ರೇಮಾ, ಚಿಂತಿ ವಿಶ್ವನಾಥ, ಜೆ. ಪರಸಪ್ಪ ಇವರನ್ನು ಸನ್ಮಾನಿಸಲಾಗುವುದು ಎಂದರು. ಸನ್ಮಾನ ಸಮಾರಂಭಕ್ಕೆ ತಾಲೂಕಿನ ಎಲ್ಲ ಗ್ರಾಮಗಳ ಸಮಾಜ ಬಾಂಧವರು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಊಳಿಗದ ಹನುಮಂತಪ್ಪ, ಜೆ. ಪರಸಪ್ಪ, ಯು. ಹನುಮಂತಪ್ಪ, ದೀಪದ ಕೃಷ್ಣಪ್ಪ, ಚಿಂತಿ ಚಕ್ರಪತಿ, ಎನ್. ಕೋಟೆಪ್ಪ ಇದ್ದರು.

ಗ್ರಾಪಂ ಕಾರ್ಯದರ್ಶಿ ಮೇಲೆ ಹಲ್ಲೆಗೆ ಖಂಡನೆ
ಹೂವಿನಹಡಗಲಿ: ಈಚಗೆ ಹೊಸಪೇಟೆ ತಾಲೂಕಿನ ಚಿಲನಕಟ್ಟಿ ಗ್ರಾಪಂ ಕಾರ್ಯದರ್ಶಿ ವಾಗೀಶ್ ಮೇಲೆ ಗ್ರಾಪಂ ಉಪಾಧ್ಯಕ್ಷೆ ಪತಿ ಹಲ್ಲೆಗೈದಿರುವ ಘಟನೆಯನ್ನು ಹೂವಿನಹಡಗಲಿ ತಾಲೂಕು ನೌಕರರ ಸಂಘ ತೀವ್ರವಾಗಿ ಖಂಡಿಸಿದೆ.
ಈ ಕುರಿತು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಂಘದ ಅಧ್ಯಕ್ಷ ಎ. ಕೊಟ್ರಗೌಡ ಮಾತನಾಡಿ, ನೌಕರರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದ್ದು, ಸರ್ಕಾರಿ ನೌಕರರು ಆತ್ಮರಕ್ಷಣೆಗಾಗಿ ಹೋರಾಟ ಮಾಡಬೇಕಾದ ಅನಿವಾರ್ಯ ಎದುರಾಗಿದೆ ಎಂದರು.
ಇದೇ ರೀತಿಯ ಘಟನೆಗಳು ಹೂವಿನಹಡಗಲಿ ತಾಲೂಕಿನಲ್ಲಿ ಜರುಗುತ್ತಿದ್ದು, ದೌರ್ಜನ್ಯವೆಸಗಿದವರ ಮೇಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳದೇ ಇರುವುದನ್ನು ಖಂಡಿಸಿ, ಸೂಕ್ತ ಕ್ರಮಕ್ಕೆ ಒತ್ತಾಯಿಸಿದರು.
ಸಂಘದ ಪದಾಧಿಕಾರಿ ಕೆ. ಪ್ರಭಾಕರ ಮಾತನಾಡಿದರು. ರಾಜ್ಯ ಪರಿಷತ್ ಸದಸ್ಯ ಆರ್. ಕರಿಯಪ್ಪ, ಕುಂದುಕೊರತೆ ಸಮಿತಿ ಅಧ್ಯಕ್ಷ ವೀರಣ್ಣ ನಾಯ್ಕ, ಸಾಂಸ್ಕೃತಿಕ ಕಾರ್ಯದರ್ಶಿ ಚಿಂತಿ ವಿಶ್ವನಾಥ, ಗ್ರಾಪಂ ಕಾರ್ಯದರ್ಶಿಗಳ ಸಂಘದ ಅಧ್ಯಕ್ಷ ಡಿ. ದೇವೇಂದ್ರಗೌಡ, ಪಟದಯ್ಯ, ಎಂ.ಪಿ.ಎಂ. ಅಶೋಕ, ಎಂ.ಎಂ. ಕೊಟ್ರಯ್ಯ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement