ಇಂದು ಇನ್ಸ್ಪೈರ್ ಆವಾರ್ಡ್ ಕಾರ್ಯಕ್ರಮ
ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಶಿಕ್ಷಣ ತರಬೇತಿ ಮತ್ತು ಸಂಶೋಧನಾ ನಿರ್ದೇಶನಾಲಯ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಸೆ. 25ರಿಂದ 27ರ ವರೆಗೆ ಇನ್ಸ್ಪೈರ್ ಅವಾರ್ಡ್ ಕಾರ್ಯಕ್ರಮ ನಡೆಯಲಿದೆ ಎಂದು ಡಯಟ್ ಉಪನಿರ್ದೇಶಕ ಗಂಗಪ್ಪ ತಿಳಿಸಿದ್ದಾರೆ.
ಕಾರ್ಯಕ್ರಮ ನಗರದ ಕೌಲ್ಬಜಾರ್ನ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆಯಲಿದೆ. ಅಂದು ಮಧ್ಯಾಹ್ನ 3ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಳ್ಳಾರಿ ಗ್ರಾಮೀಣ ಶಾಸಕ ಬಿ. ಶ್ರೀರಾಮುಲು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷೆ ಬೆಂಡಿಗೇರಿ ಶೋಭಾ, ಸಂಸದೆ ಜೆ. ಶಾಂತಾ, ಶಿವರಾಮಗೌಡ, ಶಾಸಕರಾದ ಅನಿಲ್ ಲಾಡ್, ಆನಂದ್ ಸಿಂಗ್, ಟಿ.ಎಚ್. ಸುರೇಶ್ಬಾಬು, ಈ. ತುಕಾರಾಂ, ಬಿ. ನಾಗೇಂದ್ರ, ಭೀಮಾನಾಯ್ಕ, ಬಿ.ಎಂ. ನಾಗರಾಜ, ವಿಧಾನಪರಿಷತ್ ಸದಸ್ಯ ಮೃತ್ಯುಂಜಯ ಜಿನಗಾ, ಜಿಪಂ ಉಪಾಧ್ಯಕ್ಷೆ ಮಮತಾ ಸುರೇಶ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸಾವಿತ್ರಮ್ಮ, ತಾಪಂ ಅಧ್ಯಕ್ಷ ವಿ. ಗಾದಿಲಿಂಗಪ್ಪ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಪಂ ಸಿಇಒ ಮಂಜುನಾಥ ನಾಯಕ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಸೈಯದ್ ಅಬ್ದುಲ್ ರಬ್, ಡಿಎಸ್ಇಆರ್ಟಿ ನಿರ್ದೇಶಕ ಎಚ್.ಎಸ್. ರಾಮರಾವ್, ಡಿಡಿಪಿಐ ಟಿ. ನಾರಾಯಣಗೌಡ ಉಪಸ್ಥಿತರಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.