ಇಂದು ಮಹಾಜನ ಸಭೆ
ಬಳ್ಳಾರಿ: ಜಿಲ್ಲಾ ಹಾಪ್ಕಾಮ್ಸ್ನ 46ನೇ ಮಹಾಜನ ಸಭೆ ಸೆ. 25ರಂದು ಬೆಳಗ್ಗೆ 11.30ಕ್ಕೆ ನಗರದ ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲಿ ನಡೆಯಲಿದೆ. ಸಭೆಯಲ್ಲಿ 2012-13ನೇ ಸಾಲಿನ ವಾರ್ಷಿಕ ವರದಿ ಹಾಗೂ 2013-14ನೇ ಸಾಲಿನ ಆಯವ್ಯಯದ ಬಗ್ಗೆ ಮುಂಗಡ ಪತ್ರ ಅಂಗೀಕರಿಸಿ ಲೆಕ್ಕ ಪರಿಶೋಧಕರನ್ನು ನೇಮಿಸುವ, ಸಂವಿಧಾನದ 97ನೇ ತಿದ್ದುಪಡಿಯನುಸಾರ ಸಹಕಾರಿ ಸಂಘಗಳ ಕಾಯ್ದೆಗೆ ತಿದ್ದುಪಡಿಯಾದ ಹಿನ್ನೆಲೆಯಲ್ಲಿ ಸಮಗ್ರ ಬೈಲಾ ತಿದ್ದುಪಡಿ ಹಾಗೂ ಮತ್ತಿತರ ವಿಷಯಗಳ ಕುರಿತು ಚರ್ಚಿಸಲಾಗುವುದು. ಸಂಘದ ಸದಸ್ಯರು ಸಭೆಗೆ ಬರುವಾಗ ತಪ್ಪದೆ ಸಭಾ ಸೂಚನಾ ಪತ್ರ ತರಬೇಕು. ಯಾವುದೇ ವಿಷಯಗಳು ಸಭೆಯಲ್ಲಿ ಮಂಡಿಸಬೇಕಾದಲ್ಲಿ ಸಭೆಯ ನಿಗದಿತ ದಿನಾಂಕಕ್ಕೆ ಐದು ದಿನ ಮುನ್ನವೇ ವಿಷಯವನ್ನು ಲಿಖಿತ ರೂಪದಲ್ಲಿ ಸಂಘದ ಅಧ್ಯಕ್ಷರಿಗೆ ಸಲ್ಲಿಸಬೇಕು ಎಂದು ಹಾಪ್ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.