ಮದ್ಯ ಅಕ್ರಮ ಮಾರಾಟ: ಇಬ್ಬರ ಬಂಧನ
ಬಳ್ಳಾರಿ: ಪರವಾನಗಿ ಇಲ್ಲದೆ ಮದ್ಯದ ಬಾಟಲಿಗಳನ್ನು ಮಾರಾಟ ಮಾಡುತ್ತಿರುವ ಇಬ್ಬರನ್ನು ಬಂಧಿಸಿ, ಅವರಿಂದ ನಾಲ್ಕು ಬಾಕ್ಸ್ಗಳಲ್ಲಿದ್ದ ರು. 8,294 ಮೌಲ್ಯದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿರುವ ಘಟನೆ ಸಂಡೂರು ತಾಲೂಕಿನ ನರಸಾಪುರ ಗ್ರಾಮದಲ್ಲಿ ನಡೆದಿದೆ. ಸೆ. 24ರಂದು ಸಂಜೆ ಸಂಡೂರು ತಾಲೂಕಿನ ನರಸಾಪುರ ಗ್ರಾಮದ ರಸ್ತೆ ಪಕ್ಕದಲ್ಲಿ ಶೆಡ್ಡಿನ ಮುಂದೆ ಇಬ್ಬರು ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ, ಇಬ್ಬರನ್ನು ಬಂಧಿಸಿದ್ದಾರೆ. ಈ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.