ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

'ನನಗೆ ಸಿಬಿಐ ನೋಟಿಸ್ ಬಂದಿಲ್ಲ'

Srinivasa Murthy VN
Updated On : 28 Sept 2013, 11:12 am

ಕೂಡ್ಲಿಗಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ನಾನು ನಾಪತ್ತೆಯಾಗಿದ್ದೇನೆ, ಬಂಧನದ ಭೀತಿ ಎದುರಾಗಿದೆ ಎಂಬ ಸುದ್ದಿಗಳು ಪ್ರಕಟವಾಗುತ್ತಿವೆ. ಆದರೆ ನಾನೆಲ್ಲಿಯೂ ಹೋಗಿಲ್ಲ. ನನ್ನ ಕ್ಷೇತ್ರದಲ್ಲಿಯೇ ಇದ್ದೇನೆ ಎಂದು ಕೂಡ್ಲಿಗಿ ಶಾಸಕ ಬಿ. ನಾಗೇಂದ್ರ ಸ್ಪಷ್ಟಪಡಿಸಿದರು.
ಅವರು ಶುಕ್ರವಾರ ತಾಲೂಕಿನ ಗಾಣಗಟ್ಟೆ ಗ್ರಾಮದಲ್ಲಿ ಸಿಟಿಸಿ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ನಂತರ 'ಕನ್ನಡಪ್ರಭ'ದೊಂದಿಗೆ ಮಾತನಾಡಿ, ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲ. ಸಿಬಿಐ ಈ ಹಿಂದೆ ಈ ಬಗ್ಗೆ ನನಗೆ ನೋಟಿಸ್ ಜಾರಿ ಮಾಡಿತ್ತು. ಆಗ ನಾನು ಖುದ್ದು ಸಿಬಿಐ ಕಚೇರಿಗೆ ಹೋಗಿ ಮಾಹಿತಿ ನೀಡಿದ್ದೇನೆ. ಈಗಲೂ ಸಿಬಿಐ ಕಚೇರಿಯಿಂದ ನೋಟಿಸ್ ಬಂದರೆ ಹಾಜರಾಗುತ್ತೇನೆ. ಆದರೆ ಇದುವರೆಗೆ ಮಾಧ್ಯಮಗಳಲ್ಲಿ ವರದಿಯಾದಂತೆ ನನಗೆ ಯಾವುದೇ ಸಿಬಿಐ ನೋಟಿಸ್ ಬಂದಿಲ್ಲ. ಹೀಗಾಗಿ ನಾನೂ ಕಾನೂನನ್ನು ಗೌರವಿಸುತ್ತೇನೆ ಎಂದರು.

ಕ್ಷೇತ್ರದ ಜನತೆ ಅಚ್ಚರಿ: ನಾಗೇಂದ್ರ ಅವರು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ ನೋಡಿ ಕ್ಷೇತ್ರದ ಜನತೆಗೆ ಅಘಾತವಾಗಿತ್ತು. ಆದರೆ ಶುಕ್ರವಾರ ತಾಲೂಕಿನ ಗಾಣಗಟ್ಟೆ ಮಾಯಮ್ಮ ದೇವಸ್ಥಾನ ಆವರಣದಲ್ಲಿ ನಡೆದ ಕಾಲೇಜು ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ಅಚ್ಚರಿ ತಂದಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement