ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ನಾಳೆ ಚುನಾವಣೆ

Lingaraj Badiger
Updated On : 28 Sept 2013, 10:59 am

ಬಳ್ಳಾರಿ: ಕರ್ನಾಟಕ ಪ್ರದೇಶ ಕುರುಬರ ಜಿಲ್ಲಾ ಸಂಘದ 5 ನಿರ್ದೇಶಕ ಸ್ಥಾನಗಳಿಗೆ (4 ಪುರುಷ ಹಾಗೂ 1 ಮಹಿಳೆ) ಚುನಾವಣಾ ಮತದಾನ ಸೆ. 29ರಂದು ದೇವಿನಗರದ ಕುರುಬರ ಸಂಘದ ಕಚೇರಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ನಡೆಯಲಿದೆ ಎಂದು ಸಂಘದ ಜಿಲ್ಲಾ ಚುನಾವಣಾಧಿಕಾರಿ ಚೇಳ್ಳಗುರ್ಕಿ ಕೆ. ಕೃಷ್ಣ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಈಗಾಗಲೇ ಸೆ. 9ರಂದು ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಉಮೇದುವಾರರ ಅಂತಿಮ ಪಟ್ಟಿ ಪ್ರಕಟಣೆ ಹಾಗೂ ಚಿಹ್ನೆ ವಿತರಣೆ ಮಾಡಲಾಗಿದೆ. 5 ನಿರ್ದೇಶಕ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳಿದ್ದಾರೆ. 8 ಪುರುಷರು ಹಾಗೂ ಇಬ್ಬರು ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣೆಗೆ ಸಿದ್ಧತೆ ನಡೆದಿದ್ದು, ಸೆ. 29ರಂದು ಭಾನುವಾರ ಬೆಳಗ್ಗೆ 9ರಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಅಂದು ಸಂಜೆ 5ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ. ಮತ ಎಣಿಕೆ ನಂತರ ಅಭ್ಯರ್ಥಿಗಳು ಪಡೆದ ಮತಗಳನ್ನು ತಿಳಿಸಲಾಗುವುದು. ಫಲಿತಾಂಶವನ್ನು ಸಂಘದ ರಾಜ್ಯ ಘಟಕದ ಮುಖ್ಯ ಚುನಾವಣಾಧಿಕಾರಿ ಘೋಷಣೆ ಮಾಡಲಿದ್ದಾರೆ ಎಂದಿದ್ದಾರೆ. ಸಂಘದಲ್ಲಿ 2,986 ಮತದಾರರಿದ್ದಾರೆ. ಮತದಾನಕ್ಕೆ ಆಗಮಿಸಿರುವ ಪ್ರತಿಯೊಬ್ಬರೂ ಕರ್ನಾಟಕ ಪ್ರದೇಶ ಕುರುಬರ ಸಂಘ ನೀಡಿರುವ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ಆಗ ಮಾತ್ರ ಮತದಾನಕ್ಕೆ ಅವಕಾಶ ನೀಡಲಾಗುತ್ತದೆ. ಸಂಘದ ರಾಜ್ಯ ಘಟಕ ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಿಬೇಕೆಂದು ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಗುರುತಿನ ಚೀಟಿಯನ್ನು ತರಬೇಕು. ನಗರದ ಸಂಘದ ಕಚೇರಿಯಲ್ಲಿ ಮತದಾನಕ್ಕಾಗಿ 4 ಬೂತ್‌ಗಳ ವ್ಯವಸ್ಥೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಚುನಾವಣೆ ನಡೆಸಲು ಸಹಕರಿಸಬೇಕೆಂದು ಕೋರಿದ್ದಾರೆ.
ಹಿಂದಿ ಭಾಷೆ ತಿಳಿದಿರಲಿ: ಅಶೋಕ್ ಅಭಿಮತ
ಬಳ್ಳಾರಿ: ಹಿಂದಿ ಭಾಷೆ ಕಲಿತರೆ, ದೇಶದಲ್ಲಿ ಎಲ್ಲಿಯಾದರೂ ಜೀವನ ಮಾಡಬಹುದು. ಪ್ರತಿಯೊಬ್ಬರೂ ಹಿಂದಿ ಕಲಿಯುವುದಕ್ಕೆ ಆಸಕ್ತಿವಹಿಸಬೇಕು ಎಂದು ಕುರುಗೋಡು ಬಿಇಒ ಅಶೋಕ್ ಸಿಂದಗಿ ಅವರು ತಿಳಿಸಿದ್ದಾರೆ. ಬಳ್ಳಾರಿ ತಾಲೂಕು ಹಿಂದಿ ಶಿಕ್ಷಕರ ಸಂಘದ ವತಿಯಿಂದ ನಗರದ ಜೈನ್ ಮಾರ್ಕೆಟ್ ಪ್ರದೇಶದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಹಿಂದಿ ದಿವಸ್ ಹಾಗೂ ಹಿಂದಿ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೆ ಹಿಂದಿ ಭಾಷೆ ಅತ್ಯಗತ್ಯ. ಈ ನಿಟ್ಟಿನಲ್ಲಿ ಹಿಂದಿ ಭಾಷೆಯ ಬಗ್ಗೆ ಹೆಚ್ಚಿನ ಆಸಕ್ತಿವಹಿಸಬೇಕು ಎಂದರು. ಹಿಂದಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡು ಹಿಂದಿ ಭಾಷೆಯ ಮಹತ್ವದ ಬಗ್ಗೆ ತಿಳಿಸಿದರು. ಶ್ರೀನಿವಾಸ ರೆಡ್ಡಿ, ಡಿಡಿಪಿಐ ಕಚೇರಿ ಜಿಲಾನ್ ಬಾಷಾ, ಬಳ್ಳಾರಿ ತಾಲೂಕು ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷ ಟಿ. ರಾಜಶೇಖರ್, ಲಿಂಗಪ್ಪ, ಎನ್‌ಜಿಓ ಪಂಪನಗೌಡ, ಶಿವಶಂಕರ್ ಇದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments