ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಅನುದಾನರಹಿತ ಶಾಲೆ: ಇಂದು ಸಭೆ

Rashmi Kasaragodu
Updated On : 29 Sept 2013, 12:35 pm

ಕೊಟ್ಟೂರು: ಅನುದಾನ ರಹಿತ ಸಂಸ್ಥೆಗಳ ಆಡಳಿತ ಮಂಡಳಿಗಳು ಎದುರಿಸುತ್ತಿರುವ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕೂಡ್ಲಿಗಿ ತಾಲೂಕು ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಸಭೆ ಸೆ. 29ರಂದು ಕೂಡ್ಲಿಗಿಯ ಜ್ಞಾನ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಈ ಸಭೆಗೆ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ತಪ್ಪದೇ ಭಾಗವಹಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನತ್ತ ಮುಂದಾಗಬೇಕು ಎಂದು ಇಲ್ಲಿನ ಜ್ಞಾನ ಸರೋವರ ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷ ಡಿ. ಶಿವಚರಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕೊಟ್ಟೂರು: ಪಟ್ಟಣದ ಜ್ಞಾನ ಸರೋವರ ಗ್ರಾಮೀಣ ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಕೂಡ್ಲಿಗಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ 400 ಮೀ ರಿಲೆ, 400, 100, 200 ಮೀ ಓಟದ ಸ್ಪರ್ಧೆಯಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶಾಲೆಯ ಭಾವನಾ ಟಿ.ಪಿ., ಪರಿಮಳಾ ಎಸ್., ಎಂ.ಎಸ್. ಮೇಘನಾ, ಎತ್ತರ ಉದ್ದ ಜಿಗಿತದಲ್ಲಿ ಅತ್ಯುತ್ತಮ ಸಾಧನೆಗೈದು ಪ್ರತಿಭೆ ಮೆರೆದಿದ್ದಾರೆ ಎಂದು ಸಂಸ್ಥೆ ಅಧ್ಯಕ್ಷ ಡಿ. ಶಿವಚರಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಕರ ಸಂಘದ ವಾರ್ಷಿಕ ಮಹಾಸಭೆ
ಬಳ್ಳಾರಿ: ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ನಗರದ ಸಂಘದ ಕಚೇರಿಯಲ್ಲಿ ಜರುಗಿತು. ಸಂಘದ ನಿರ್ದೇಶಕ ನಾಗರಾಜ ಮಸೂತಿ ವಾರ್ಷಿಕ ವರದಿ ಮಂಡಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಟಿ. ಮಲ್ಲೇಶ್, ಗುಲ್ಬರ್ಗ ವಲಯದ ಸಹ ನಿರ್ದೇಶಕ ಡಾ. ಎಚ್. ಬಾಲರಾಜ, ಸಂಘದ ಪೂರ್ವ ವಲಯ ಅಧ್ಯಕ್ಷ ಎನ್. ಚಂದ್ರಶೇಖರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಡಿ. ಮಲ್ಲಿಕಾರ್ಜುನ ಸಭೆಯಲ್ಲಿ ಮಾತನಾಡಿದರು. ನಂತರ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಬೆಣಕಲ್ ಬಸಪ್ಪ ಸ್ವಾಗತಿಸಿದರು. ಕೆ. ದೊಡ್ಡಬಸಪ್ಪ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement