ವಾಲ್ಮೀಕಿ ಜಯಂತಿ: ಅ. 3ರಂದು ಪೂರ್ವಭಾವಿ ಸಭೆ
ಬಳ್ಳಾರಿ: ಜಿಲ್ಲೆಯಲ್ಲಿ ಅಕ್ಟೋಬರ್ 18ರಂದು ಸೀಗೆ ಹುಣ್ಣಿಮೆಯಂದು ಆಚರಿಸುವ ವಾಲ್ಮೀಕಿ ಜಯಂತ್ಯುತ್ಸವದ ಪೂರ್ವಭಾವಿ ಸಿದ್ಧತಾ ಸಭೆ ಅಕ್ಟೋಬರ್ 3ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಸಲಾಗುವುದು. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸದರಿ ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಜರಾಗಬೇಕೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಿ. ಪೋಲಯ್ಯ ತಿಳಿಸಿದ್ದಾರೆ.