ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

'ಕೈ' ಕಾರ್ಯಕರ್ತರಿಗೆ ಊಟ: ಅಭ್ಯರ್ಥಿ ವಿರುದ್ಧ ದೂರು

Mainashree
Updated On : 3 Apr 2014, 12:12 pm

ಬಳ್ಳಾರಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆಂಬ ಆರೋಪದಡಿ ಪಕ್ಷದ ಬಳ್ಳಾರಿ ಲೋಕಸಭಾ ಅಭ್ಯರ್ಥಿ ಎನ್.ವೈ. ಹನುಮಂತಪ್ಪ ಅವರ ಮೇಲೆ ಬಳ್ಳಾರಿ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್.ವೈ. ಹನುಮಂತಪ್ಪ ಅವರ ಮನೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆಂದು ಎಂಸಿಸಿ ತಂಡದ ರಮೇಶ್ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ ಎನ್.ವೈ. ಹನುಮಂತಪ್ಪನವರ ಮೇಲೆ ಚುನಾವಣೆ ನೀತಿಸಂಹಿತೆ ಉಲ್ಲಂಘನೆ ಪ್ರಕರಣವನ್ನು ಗಾಂಧಿನಗರ ಪೊಲೀಸರು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement