ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಬಾಬೂಜಿ ತತ್ವಾದರ್ಶ ಅಳವಡಿಸಿಕೊಳ್ಳಿ

Rashmi Kasaragodu
Updated On : 7 Apr 2014, 12:31 pm

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಏ. 6
ಡಾ. ಬಾಬು ಜಗಜೀವನರಾಮ್ ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಮಾದರಿ ವ್ಯಕ್ತಿಗಳಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂದು ಡಿವೈಎಸ್ಪಿ ಡಿ.ಡಿ. ಮಾಳಗಿ ಹೇಳಿದರು.
ನಗರದಲ್ಲಿ ಶನಿವಾರ ರೋಟರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವರಾಮ್ ಅವರ 107ನೇ ಜಯಂತ್ಯುತ್ಸವ ಹಾಗೂ ನೇತ್ರದಾನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶೈಕ್ಷಣಿಕ ಮತ್ತು ಸಾಮಾಜಿಕ ಮತ್ತು ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಮುಂದಾಗಬೇಕು. ಡಾ. ಬಾಬು ಜಗಜೀವನ್ ರಾಮ್ ಅವರ ಕನಸುಗಳನ್ನು ನನಸಾಗಿಸಲು ಮುಂದಾಗಬೇಕು. ಡಾ. ಬಾಬು ಜಗಜೀವನ್ ರಾಮ್ ಜಯಂತ್ಯುತ್ಸವ ಸಮಾರಂಭದಲ್ಲಿ ನೇತ್ರದಾನ ಶಿಬಿರದಂಥ ಕಾರ್ಯಕ್ರಮ ಹಮ್ಮಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದ್ದು, ನೇತ್ರದಾನ ಪವಿತ್ರ ಕಾರ್ಯ ಎಂದು ಶ್ಲಾಘಿಸಿದರು.
ಬೆಂಗಳೂರಿನ ನಾರಾಯಣ ನೇತ್ರಾಲಯದ ಡಾ. ಕೃಷ್ಣ ಮಾತನಾಡಿ, ನೇತ್ರದಾನ ಅತಿ ಮುಖ್ಯವಾಗಿದೆ. ಸಮಾಜದಲ್ಲಿ ಎಷ್ಟೋ ಜನರು ದೃಷ್ಟಿಯಿಲ್ಲದೆ, ಜಗತ್ತನ್ನು ಕತ್ತಲಲ್ಲೇ ನೋಡುವಂಥ ಸ್ಥಿತಿ ಅನುಭವಿಸುವಂತರಿಗೆ ನೇತ್ರದಾನ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕು ಎಂದರು.
ತಾಯಮ್ಮ ಶಕ್ತಿಸಂಘದ ಅಧ್ಯಕ್ಷೆ ಕವಿತಾ ಈಶ್ವರ್ ಸಿಂಗ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನೇತ್ರದಾನದ ಮೂಲಕ ಇನ್ನೊಬ್ಬರ ಕಣ್ಣು ತೆರೆಸುವ ಕಾರ್ಯಕ್ರಮವಾಗಿದೆ ಎಂದರು.
ಡಾ. ಬಾಬು ಜಗಜೀವನರಾಮ್ ಸಂಘದ ಅಧ್ಯಕ್ಷ ಎಚ್.ಎಸ್. ವೆಂಕಪ್ಪ ಅಧ್ಯಕ್ಷತೆ ವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಸಂಘದ ತಾಲೂಕು ಅಧ್ಯಕ್ಷ ಎಂ.ಸಿ. ವೀರಸ್ವಾಮಿ, ಕನ್ನಡ ವಿವಿ ಉಪ ಕುಲಸಚಿವ ಡಾ. ಎ. ವೆಂಕಟೇಶ್, ಸಂಘದ ಗೌರವಾಧ್ಯಕ್ಷ ಬಿ. ದೇವದಾಸ್, ರೋಟರಿ ಕ್ಲಬ್ ಅಧ್ಯಕ್ಷ ಎಚ್. ಶ್ರೀನಿವಾಸರಾವ್ ಇದ್ದರು. ಸಂಘದ ಖಜಾಂಚಿ ರಾಮಕೃಷ್ಣ ಸ್ವಾಗತಿಸಿದರು. ಕೇಂದ್ರ ಸಹಕಾರ ಬ್ಯಾಂಕ್ ಎಸ್ಸಿ ಎಸ್ಟಿ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಪಿ. ಉಮಾಪತಿ ಪ್ರಾಸ್ತಾವಿಕ ಮಾತನಾಡಿದರು. ಸಭೆಯಲ್ಲಿ 250ಕ್ಕೂ ಅಧಿಕ ಜನರು ನೇತ್ರದಾನಕ್ಕೆ ಹೆಸರು ನೋಂದಾಯಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement