ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಸ್ಟ್ರಾಂಗ್‌ರೂಂಗೆ 15 ಸಿಸಿ ಕ್ಯಾಮೆರಾ

Lingaraj Badiger
Updated On : 19 Apr 2014, 11:27 am

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಏ. 18
ಇವಿಎಂ ಯಂತ್ರಗಳನ್ನು ಸಂಗ್ರಹಿಸಿರುವ ಸ್ಟ್ರಾಂಗ್ ರೂಮ್ ವ್ಯವಸ್ಥೆ ಮಾಡಿರುವ ಸ್ಥಳದಲ್ಲಿ ಸುಮಾರು 15 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಚೇತನ್‌ಸಿಂಗ್ ರಾಥೋಡ್ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಸಿ ಕ್ಯಾಮೆರಾಗಳು ಸೆರೆ ಹಿಡಿಯುವ ದೃಶ್ಯವನ್ನು ವೀಕ್ಷಣೆಯ ವ್ಯವಸ್ಥೆಯನ್ನು ಅಲ್ಲಿಯೇ ಮಾಡಲಾಗಿದೆ. ಅಗತ್ಯ ಬಿದ್ದರೆ ಹೆಚ್ಚಿನ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಈಗಾಗಲೇ ಬೇಕಾಗುವ ಅಗತ್ಯ ಭದ್ರತೆ ಒದಗಿಸಲಾಗಿದೆ ಎಂದರು.
ಈ ಲೋಕಸಭಾ ಕ್ಷೇತ್ರದಲ್ಲಿ 12 ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾರ್ವತಿ ನಗರದ ಪಾರ್ಕ್ ಬಳಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮತಗಟ್ಟೆ 72ರಲ್ಲಿ ಶೇ. 53.43, ಮತಗಟ್ಟೆ 73ರಲ್ಲಿ ಶೇ. 52.52, ಮತಗಟ್ಟೆ 74ರಲ್ಲಿ ಶೇ. 60.13ರಷ್ಟು, ತಹಸೀಲ್ದಾರ್ ಕಚೇರಿ ಆವರಣದಲ್ಲಿರುವ ಹಿಂದು ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರ ಕಚೇರಿಯಲ್ಲಿ ಸ್ಥಾಪಿಸಿದ್ದ ಮತಗಟ್ಟೆ 119ರಲ್ಲಿ ಶೇ. 51.31, ಮತಗಟ್ಟೆ 121ರಲ್ಲಿ ಶೇ. 67.16ರಷ್ಟು ಮತದಾನವಾಗಿದೆ ಎಂದು ತಿಳಿಸಿದ್ದಾರೆ.
ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸ್ಥಾಪಿಸಿದ್ದ ಮತಗಟ್ಟೆ 22ರಲ್ಲಿ ಶೇ. 60.10ರಷ್ಟು, 23ರಲ್ಲಿ ಶೇ. 61.26, 25ರಲ್ಲಿ ಶೇ. 63.24ರಷ್ಟು ಮತದಾನವಾಗಿದೆ. ವಿಜಯ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಸಪೇಟೆಯ ಹುಡಾ ಕಚೇರಿಯಲ್ಲಿ ಸ್ಥಾಪಿಸಿದ್ದ ಮತಗಟ್ಟೆಯಲ್ಲಿ ಶೇ. 68.73ರಷ್ಟು ಹೊಸಪೇಟೆ ನಗರಸಭೆ ಕಚೇರಿಯ ಹೊಸ ಕಟ್ಟಡದಲ್ಲಿ ಸ್ಥಾಪಿಸಿದ್ದ ಮತಗಟ್ಟೆಯಲ್ಲಿ ಶೇ. 69.39ರಷ್ಟು, ಸಂಡೂರು ವಿಧಾನಸಭೆ ವ್ಯಾಪ್ತಿಯ ತೋರಣಗಲ್ಲಿನಲ್ಲಿರುವ ವಿಶಾಲ ಬಾಲವಾಡಿ ಜೆಎಸ್‌ಡಬ್ಲ್ಯು ಫೌಂಡೇಷನ್‌ನಲ್ಲಿ ಸ್ಥಾಪಿಸಿದ್ದ ಮತಗಟ್ಟೆ 92ರಲ್ಲಿ ಶೇ. 69.76, 93ರಲ್ಲಿ ಶೇ. 61.60ರಷ್ಟು ಮತದಾನವಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement