ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಆರಂಭ

Mainashree
Updated On : 21 Apr 2014, 10:01 am

ಹೊಸಪೇಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಗರದ 6 ಕೇಂದ್ರಗಳಲ್ಲಿ ಭಾನುವಾರದಿಂದ ಆರಂಭಗೊಂಡಿದೆ.
ಹೊಸಪೇಟೆ ನಗರದ ಲಿಟ್ಲ್ ಫ್ಲವರ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಪಟೇಲ್ ನಗರದ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜು, ಗೋಪಿನಾಥರಾವ್ ಸ್ಮಾರಕ ಪ್ರೌಢಶಾಲೆ, ಮಹಿಳಾ ಸಮಾಜ ಪ್ರೌಢಶಾಲೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ (ಮಾಜಿ ಪುರಸಭೆ) ಹಾಗೂ ದೀಪಾಯನ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಮೌಲ್ಯಮಾಪನ ಕಾರ್ಯ ಭರದಿಂದ ನಡೆಯುತ್ತಿದೆ. ಆಯಾ ವಿಷಯವಾರು ಶಿಕ್ಷಕರು ತಮ್ಮ ಕೇಂದ್ರದಲ್ಲಿ ಮೌಲ್ಯಮಾಪನ ಕಾರ್ಯ ನಡೆಸಿದ್ದಾರೆ. ಮೌಲ್ಯಮಾಪನ ಕೇಂದ್ರಗಳ ಸುತ್ತ ಏ. 20ರಿಂದ 28ರ ವರೆಗೆ ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ನಿಷೇಧಿತ ಸ್ಥಳಗಳಲ್ಲಿ ಯಾರೂ ಶಸ್ತ್ರ, ಬಡಿಗೆ, ಬರ್ಚಿ, ಗದೆ, ಬಂದೂಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತುಗಳು, ಸ್ಪೋಟಕ ವಸ್ತುಗಳನ್ನು ಒಯ್ಯುವಂತಿಲ್ಲ. ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದನ್ನು ಪ್ರತಿಬಂಧಿಸಲಾಗಿದೆ. ಮೌಲ್ಯಮಾಪನ ಕೇಂದ್ರಗಳ ಸುತ್ತಮುತ್ತ  200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ, ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement