ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಉಚಿತ ನೇತ್ರ ತಪಾಸಣೆ

Rashmi Kasaragodu
Updated On : 23 Apr 2014, 12:15 pm

ಬಳ್ಳಾರಿ: ರಾಷ್ಟ್ರೀಯ ಬಸವದಳ ಟ್ರಸ್ಟ್ ಜಿಲ್ಲಾ ಘಟಕದಿಂದ ವಿಶ್ವಗುರು ಬಸವಣ್ಣನವರ 881ನೇ ಜಯಂತಿ ಮಹೋತ್ಸವದ ನಿಮಿತ್ತ ಏ. 22ರಂದು ತಾಲೂಕಿನ ಡಿ. ಕಗ್ಗಲ್ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಸ್ಥಳೀಯ ಡಾ. ವಿಜಯನಾಗರಾಜ್ ಕಣ್ಣಿನ ಆಸ್ಪತ್ರೆ ಆಶ್ರಯದಲ್ಲಿ ಶಿಬಿರ ಆಯೋಜಿಸಲಾಗಿದ್ದು, ಶಿಬಿರ ಅಂದು ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ನಡೆಯಲಿದೆ. ನೇತ್ರ ತಜ್ಞರಾದ ಡಾ. ಟಿ. ನಾಗರಾಜ ಹಾಗೂ ಡಾ. ಎನ್. ವಿಜಯ್ ಶಿಬಿರದಲ್ಲಿ ರೋಗಿಗಳ ತಪಾಸಣೆ ನಡೆಸಲಿದ್ದು, ಗ್ರಾಮಸ್ಥರು ಶಿಬಿರದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜಿ. ಶಿವಪ್ರಕಾಶ್ ಮೊ: 9481046718, ಜಿ.ಎಸ್. ಸರ್ವಮಂಗಳ ಶಿವಪ್ರಕಾಶ್ ಮೊ: 9538716023ಗೆ ಸಂಪರ್ಕಿಸುವಂತೆ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಕೆ.ವಿ. ರವಿಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಬೇಡ್ಕರ್ ಸಂಘಕ್ಕೆ ದೊಡ್ಡಬಸಪ್ಪ ರಾಜಿನಾಮೆ
ಹಗರಿಬೊಮ್ಮನಹಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಸಂಘದ ಹಗರಿಬೊಮ್ಮನಹಳ್ಳಿ ತಾಲೂಕು ಸಮಿತಿ ಅಧ್ಯಕ್ಷ ಗದ್ದಿಕೇರಿ ದೊಡ್ಡಬಸಪ್ಪ ಸೋಮವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜೂನ್ 9, 2009ರಿಂದ ಇಲ್ಲಿವರೆಗೂ ಸಂಘದ ತಾಲೂಕು ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ನನ್ನ ಮೇಲೆ ವಿಶ್ವಾಸವಿಟ್ಟು ಹಿರಿಯರು, ಮುಖಂಡರು ನನಗೆ ಒಪ್ಪಿಸಿದ ಜವಾಬ್ದಾರಿಯನ್ನು ನಾನು ಸಮರ್ಥವಾಗಿ ನಿಭಾಯಿಸುವ ಮೂಲಕ ನ್ಯಾಯ ಕಲ್ಪಿಸಿಕೊಡುವ ಕೆಲಸ ಮಾಡಿದ್ದೇನೆ. ತಾಲೂಕು ಮಟ್ಟದಲ್ಲಿ ಸಂಘಟನೆ ಮಾಡಲು ಅವಕಾಶ ಮಾಡಿಕೊಟ್ಟಿರುವ ತಾಲೂಕಿನ ಎಲ್ಲ ದಲಿತ ಬಂಧುಗಳಿಗೆ ಕೃತಜ್ಞತೆ ಸಲ್ಲಿಸುವೆ ಎಂದು ದೊಡ್ಡಬಸಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದು, ನಾನು ಸ್ವ-ಇಚ್ಛೆಯಿಂದ ಅಂಬೇಡ್ಕರ್ ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ನೂತನ ಪದಾಧಿಕಾರಿಗಳ ಆಯ್ಕೆ: ರಾಜ್ಯ ದಲಿತ ಸಂಘರ್ಷ ಸಮಿತಿಯ ಹಗರಿಬೊಮ್ಮನಹಳ್ಳಿ ತಾಲೂಕು ಸಮಿತಿಗೆ ಸೋಮವಾರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ತಾಲೂಕಿನ ಕಡ್ಲಬಾಳು ಗ್ರಾಮದ ಎಂ. ಗುಡುದಪ್ಪ ತಾಲೂಕು ಸಂಚಾಲಕರಾಗಿ ಆಯ್ಕೆಗೊಂಡಿದ್ದಾರೆ. ಮಾದೂರು ಮಹೇಶ, ಬನ್ನಿಗೊಳ ಉಮೇಶ, ಕೊಗಳಿ ಶಿವಮೂರ್ತಿ, ಮೋರಿಗೇರಿ ರಮೇಶ ಸಂಘಟನಾ ಸಂಚಾಲಕರು, ಉಲುವತ್ತಿ ಓಮೇಶ ಖಜಾಂಚಿಯಾಗಿ ಆಯ್ಕೆಗೊಂಡಿದ್ದಾರೆ. ಹಿರಿಯ ದಲಿತ ಮುಖಂಡರಾದ ಯಡ್ರಮ್ಮನಹಳ್ಳಿ ಮರಿಯಪ್ಪ, ಕೆಚ್ಚಿನಬಂಡಿ ದುರುಗಪ್ಪ ಹಿರಿಯ ಸಲಹೆಗಾರರಾಗಿ ಆಯ್ಕೆಗೊಂಡಿದ್ದಾರೆ. ಬಳ್ಳಾರಿ ಜಿಲ್ಲಾ ಸಂಘಟನಾ ಸಂಚಾಲಕ ಎಚ್. ದೊಡ್ಡಬಸಪ್ಪ ನೇತೃತ್ವದಲ್ಲಿ ತಾಲೂಕು ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಎಂದು ಸಂಘದ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement