ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಮಕ್ಕಳ ಸೌಲಭ್ಯ ಸದುಪಯೋಗ ಆಗಲಿ

Lingaraj Badiger
Updated On : 26 Apr 2014, 11:33 am

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಏ. 25
ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆತಂದು ಮುಖ್ಯ ವಾಹಿನಿಗೆ ತರಲು ಸರ್ಕಾರ ಅನೇಕ ಜನಪರ ಯೋಜನೆಗಳನ್ನು ತಂದಿದ್ದು, ಪೊಷಕರು ಇದರ ಸದುಪಯೋಗ ಪಡೆದುಕೊಂಡು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ರೂಪಿಸಬೇಕು ಎಂದು ಹೊಸಪೇಟೆ ಶಿಕ್ಷಣ ಇಲಾಖೆ ಬಿಆರ್‌ಸಿ ಎ.ಎಂ. ಸುಧಾಕರ್ ಹೇಳಿದರು.
ತಾಲೂಕಿನ ಕಮಲಾಪುರದ ಸಿದ್ಧೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ 2014-15ನೇ ಸಾಲಿನ ವಸತಿರಹಿತ ವಿಶೇಷ ತರಬೇತಿ ಕೇಂದ್ರ (ಚಿಣ್ಣರ ಅಂಗಳ)ವನ್ನು ಉದ್ಘಾಟಿಸಿ ಮಾತನಾಡಿದರು.
ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆತರಲು ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಬಿಸಿಯೂಟ, ಆರ್‌ಟಿಇ, ಕ್ಷೀರಭಾಗ್ಯ, ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ಧನ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಪೊಷಕರು ಮಕ್ಕಳನ್ನು ಶಾಲೆಗೆ ಕಳುಹಿಸಬೇಕು ಹಾಗೂ ಅವರನ್ನು ಮುಖ್ಯ ವಾಹಿನಿಗೆ ತಂದು ಉತ್ತಮ ನಾಗರಿಕರನ್ನಾಗಿ ಮಾಡಬೇಕು. ಶಿಕ್ಷಣ ಎಲ್ಲ ವರ್ಗದ ಏಳ್ಗೆಗೆ ಸಹಾಯಕವಾಗುತ್ತದೆ. ಉಚಿತ ಶಿಕ್ಷಣ ಮತ್ತು ಶಾಲೆಗಳಲ್ಲಿ ಮಕ್ಕಳಿಗೆ ನಾನಾ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದ್ದು, ಇವುಗಳ ಸದುಪಯೋಗಕ್ಕೆ ಮುಂದಾಗಬೇಕು ಎಂದು ಹೇಳಿದರು. ಮುಖ್ಯ ಶಿಕ್ಷಕಿ ಡಿ. ಸುಶೀಲಮ್ಮ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪ್ರಭಾರಿ ಮುಖ್ಯಗುರು ಎಲ್. ಹಾಲ್ಯಾನಾಯ್ಕ, ಜೆಸಿ ಶಾಲೆ ಮುಖ್ಯಗುರು ಅನ್ವರ್ ಅಲಿ, ಸಿಆರ್‌ಪಿಗಳಾದ, ಹನುಮಂತಪ್ಪ, ಭೋಜರಾಜ್, ಶಿಕ್ಷಕ ಹನುಮಂತಪ್ಪ, ಸಿದ್ದಮ್ಮ ಇತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement