ಬಾಬಾ ಗಡಿಪಾರಿಗೆ ಆಗ್ರಹ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಏ. 30
ದಲಿತರ ಕುರಿತ ಅವಹೇಳನಕಾರಿ ಹೇಳಿಕೆ ನೀಡಿರುವ ಯೋಗಗುರು ಬಾಬಾ ರಾಮ್ದೇವ್ರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಹಾಗೂ ಗಡಿಪಾರು ಮಾಡುವಂತೆ ಆಗ್ರಹಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಘಟಕ ಒತ್ತಾಯಿಸಿದೆ.
ಈ ಕುರಿತು ಬುಧವಾರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿರುವ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ, ದಲಿತರ ಮನೆಗಳಿಗೆ ಹನಿಮೂನ್, ಪಿಕ್ನಿಕ್ ಮಾಡಲು ಹೋಗುತ್ತಿದ್ದಾರೆ ಎಂಬ ಅವಹೇಳನಕಾರಿ ಹೇಳಿಕೆ ನೀಡಿರುವ ಯೋಗಗುರು ಬಾಬಾ ರಾಮ್ದೇವ್ರ ವಿರುದ್ಧ ಕಾನೂನು ಚೌಕಟ್ಟಿನ ಅಡಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂದರ್ಭ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸಂಚಾಲಕ ಕಪ್ಪಗಲ್ಲು ಓಂಕಾರಪ್ಪ, ರಾಜ್ಯ ಸದಸ್ಯರಾದ ಡಿ.ಎಚ್. ಹನುಮೇಶಪ್ಪ, ಎನ್.ಡಿ. ವೆಂಕಮ್ಮ, ಪದಾಧಿಕಾರಿಗಳಾದ ಜೆ. ಶ್ರೀನಿವಾಸ, ಸಿ. ಶಿವಕುಮಾರ್, ಜಿ. ಕುಮಾರ್, ಪಿ.ಡಿ. ರಾಮನಾಯಕ, ಎಚ್. ಬಸವರಾಜ, ನಾಗರಾಜ, ಈಶ್ವರ್, ಮಲ್ಲಿ, ವಕೀಲ ಸಂಗನಕಲ್ಲು ಸಿ. ಈಶ್ವರರಾವ್, ವೆಂಕಟೇಶ್ ಹಾಗೂ ಮುಖಂಡ ಕುಂದಕೂರು ರಾಮುಡು, ನಂದೀಶ್ ಸೇರಿದಂತೆ ಇತರೆ ಕಾರ್ಯಕರ್ತರು ಹಾಗೂ ದಲಿತ ಮುಖಂಡರು ಭಾಗವಹಿಸಿದ್ದರು.
ರಾಮ್ದೇವ್ ವಿರುದ್ಧ ಕ್ರಮ ಕೈಗೊಳ್ಳಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಏ. 30
ದಲಿತರ ಕುರಿತು ಅವಹೇಳನಕಾರಿ ಹೇಳಿಕೆಯನ್ನು ನೀಡಿರುವ ಯೋಗಗುರು ಬಾಬಾ ರಾಮ್ದೇವ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಅವರನ್ನು ಗಡಿಪಾರು ಮಾಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಜನತಾದಳ (ಜಾತ್ಯತೀತ) ಪಕ್ಷದ ಎಸ್ಸಿ, ಎಸ್ಟಿ ಘಟಕ ಆಗ್ರಹಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜೆಡಿಎಸ್ ಎಸ್ಸಿ, ಎಸ್ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ. ತಾಯಣ್ಣ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ದಲಿತರ ಮನೆಗಳಿಗೆ ಹನಿಮೂನ್, ಪಿಕ್ನಿಕ್ ಮಾಡಲು ಹೋಗುತ್ತಿದ್ದಾರೆ ಎಂಬ ಅವಹೇಳನಕಾರಿ ಹೇಳಿಕೆ ನೀಡಿರುವ ಯೋಗಗುರು ಬಾಬಾ ರಾಮ್ದೇವ್ ವಿರುದ್ಧ ಕಾನೂನು ಚೌಕಟ್ಟಿನ ಅಡಿಯಲ್ಲಿ ಕಠಿಣ ಶಿಕ್ಷೆ ವಿಧಿಸಬೇಕು. ರಾಷ್ಟ್ರದಲ್ಲಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಇವರನ್ನು ಗಡಿಪಾರು ಮಾಡಬೇಕು. ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ, ಒಂದು ಸಮುದಾಯದ ಘನತೆಗೆ ಕುಂದು ತರುವ ಇಂಥ ಡೋಂಗಿ ಬಾಬಾಗಳನ್ನು ತಕ್ಷಣ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.