ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಿ: ರಾಮರೆಡ್ಡಿ ಸಲಹೆ

Rashmi Kasaragodu
Updated On : 11 Feb 2014, 11:39 am

ಬಳ್ಳಾರಿ: ಶಿಸ್ತು, ಸಂಯಮವನ್ನು ಜೀವನದಲ್ಲಿ ಅಳವಡಿಸಿಕೊಂಡು ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಬಳ್ಳಾರಿಯ ಎಸ್ಜಿಟಿ ಕಾಲೇಜಿನ ಪ್ರಾಚಾರ್ಯ ಎನ್. ರಾಮರೆಡ್ಡಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಸ್ಥಳೀಯ ಶ್ರೀಗುರು ತಿಪ್ಪೇರುದ್ರ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಪರೀಕ್ಷೆಗಳು ಸಮೀಪಿಸುತ್ತಿದ್ದು, ಶ್ರದ್ಧೆ, ಆಸಕ್ತಿ ವಹಿಸಿ ಅಭ್ಯಾಸ ಮಾಡಿ ಉತ್ತಮ ಅಂಕಗಳನ್ನು ಗಳಿಸುವ ಮೂಲಕ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಕಾಲೇಜಿನ ಎಚ್.ಆರ್. ಬಾಲರಾಜ್, ಕಾರ್ಯದರ್ಶಿ ಜಿ. ನಾಗರಾಜ, ಉಪನ್ಯಾಸಕ ರಾಚಪ್ಪ ಮಾತನಾಡಿ, ಪರಿಶ್ರಮಕ್ಕೆ ಪರ್ಯಾಯ ಬೇರೊಂದಿಲ್ಲ. ಹೀಗಾಗಿ ಹಣಕ್ಕೆ ಏನೆಲ್ಲ ದೊರೆಯಲಿರುವ ಜಗತ್ತಿನಲ್ಲಿ ಜ್ಞಾನ ಮತ್ತು ಉತ್ತಮ ಜೀವನ ರೂಪಿಸಿಕೊಳ್ಳಲು ವಿದ್ಯೆಯಿಂದ ಮಾತ್ರ ಸಾಧ್ಯವಾಗಿದ್ದು, ಅದು ತಮ್ಮಲ್ಲಿ ಪರಿಪೂರ್ಣವಾಗಿ ಒಲಿಯಬೇಕೆಂದರೆ ಕಠಿಣ ಪರಿಶ್ರಮ ಬಿಟ್ಟರೆ ಬೇರೊಂದು ಮಾರ್ಗವಿಲ್ಲ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುರುತಿಪ್ಪೇರುದ್ರ ವಹಿಸಿದ್ದರು. ಇದಕ್ಕೂ ಮುನ್ನ ಕಾಲೇಜಿನಲ್ಲಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಕೆ.ಬಿ. ಮಹೇಶ್ (ಪ್ರಥಮ), ಮಠಮ್ ಶೋಭಾ (ದ್ವಿತೀಯ), ಹರ್ಷ (ತೃತೀಯ) ಅವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು. ನಂತರ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement