ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಶ್ರೀರಾಮುಲು ಬಿಜೆಪಿಗೆ: ಚಂದ್ರನಾಯ್ಕ

Lingaraj Badiger
Updated On : 27 Feb 2014, 11:12 am

ಹೂವಿನಹಡಗಲಿ: ಬಿಎಸ್ಸಾರ್ ಕಾಂಗ್ರೆಸ್ ಸಂಸ್ಥಾಪಕ, ಶಾಸಕ ಬಿ. ಶ್ರೀರಾಮುಲು ಬಿಜೆಪಿ ಸೇರ್ಪಡೆ ಕುರಿತು ಕೇಂದ್ರ, ರಾಜ್ಯ ನಾಯಕರು ಚರ್ಚೆ ನಡೆಸಿದ್ದು, ಬಿಜೆಪಿಗೆ ಬರುವ ನಿರೀಕ್ಷೆಯಲ್ಲಿದ್ದೇವೆಂದು ಮಾಜಿ ಶಾಸಕ ಬಿ. ಚಂದ್ರನಾಯ್ಕ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ಪ್ರಧಾನ ಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಬಗ್ಗೆ ಶ್ರೀಸಾಮಾನ್ಯರ ಒಲವು ಹೆಚ್ಚಾಗಿದೆ. ರಾಜ್ಯದಿಂದ ಅತಿಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ಸಾಧಿಸಿ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಲು ಶ್ರಮಿಸುತ್ತಿದ್ದೇವೆ. ಶ್ರೀರಾಮುಲು ಬಿಜೆಪಿ ಸೇರ್ಪಡೆ ವಿಚಾರ ಫೆ. 28ರಂದು ಅಂತಿಮಗೊಳ್ಳಲಿದೆ ಎಂದರು.
ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ನಯಾ ಪೈಸೆ ಬಿಡುಗಡೆ ಮಾಡದೆ ಬಿಜೆಪಿ ಸರ್ಕಾರದಲ್ಲಿ ಮಂಜೂರಾಗಿದ್ದ ಯೋಜನೆಗಳನ್ನೆ ಮುಂದುವರೆಸಿದೆ. ಆದರೆ ಸಚಿವರು ಕಾಂಗ್ರೆಸ್ ಸರ್ಕಾರ ಮಂಜೂರು ಮಾಡಿರುವ ಅನುದಾನ ಎಂದು ಹೇಳುತ್ತಾ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆಂದು ದೂರುತ್ತ, ಈ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಕೆಳಗೆ ಇಳಿದ ನಂತರ ಬರುತ್ತಾರೇ ಎಂಬುದನ್ನು ಕಾದು ನೋಡಬೇಕೆಂದು ವ್ಯಂಗ್ಯವಾಡಿದರು.
ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಚಂದ್ರಕಾಂತ್ ಕಾಮತ್ ಮಾತನಾಡಿ, ನಿಮ್ಮ ಧ್ವನಿ ನಮ್ಮ ಪ್ರಣಾಳಿಕೆಯ ಅಭಿಯಾನವನ್ನು ಈಗಾಗಲೆ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಹಮ್ಮಿಕೊಂಡು ಯಶಸ್ವಿಯಾಗಿದೆ. ಹಗರಿಬೊಮ್ಮನಹಳ್ಳಿಯಲ್ಲಿ ರೈತರು, ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು ಎಂದ ಅವರು, ಹೂವಿನಹಡಗಲಿಯಲ್ಲಿ ಮಾಜಿ ಶಾಸಕರು ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆಂದು ತಿಳಿಸಿದರು.
ಸುದ್ದಿಗೋಷ್ಠಿ ಬಳಿಕ ಪಟ್ಟಣದ ತೇರು ಹನುಮಪ್ಪ ದೇವಸ್ಥಾನದ ಆವರಣದಲ್ಲಿ ನಿಮ್ಮ ಧ್ವನಿ ನಮ್ಮ ಪ್ರಣಾಳಿಕೆ ಅಭಿಯಾನಕ್ಕೆ ಮಾಜಿ ಶಾಸಕ ಬಿ. ಚಂದ್ರನಾಯ್ಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ವಕ್ತಾರ ಎಂ.ಬಿ. ಬಸವರಾಜ ಸೋಗಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಎಚ್. ಪೂಜೆಪ್ಪ, ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಮೈಲಾರಲಿಂಗ ನಾಯಕ ಮುಖಂಡರಾದ ಸೊಪ್ಪಿನ ಬಸಣ್ಣ, ಬೀರಬ್ಬಿ ಬಸವರಾಜ, ಈಟಿ ಲಿಂಗರಾಜ, ವೈ. ಜಯಣ್ಣ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement