ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಕುಡಿವ ನೀರಿಗಾಗಿ ರು. 83 ಕೋಟಿ

Lingaraj Badiger
Updated On : 2 Jan 2014, 12:26 pm

ಕನ್ನಡಪ್ರಭ ವಾರ್ತೆ, ಹೂವಿನಹಡಗಲಿ, ಜ. 1
ವಿಧಾನಸಭಾ ವ್ಯಾಪ್ತಿಯ ವಿವಿಧ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ರು. 83 ಕೋಟಿ ಮಂಜೂರಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಹೇಳಿದರು.
ತಾಲೂಕಿನ ದಾಸರಹಳ್ಳಿ ತಾಂಡಾದಲ್ಲಿ ಈಚಗೆ ಕುಡಿವ ನೀರಿನ ಮೇಲ್ಮಟ್ಟದ ಜಲಾಗಾರ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ನೆನೆಗುದಿಗೆ ಬಿದ್ದಿರುವ ದಾಸರಹಳ್ಳಿ ತಾಂಡಾ ಹಾಗೂ ಇತರೆ 4 ಗ್ರಾಮಗಳ ಸಂಯುಕ್ತ ಕುಡಿವ ನೀರಿನ ಯೋಜನೆಯ ತಾಂತ್ರಿಕ ನ್ಯೂನತೆಗಳನ್ನು ಸರಿಪಡಿಸಿ 2 ತಿಂಗಳೊಳಗೆ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.
ಕ್ಷೇತ್ರದ ಎಲ್ಲ ಹಳ್ಳಿಗಳಿಗೂ ಪ್ಲೋರೈಡ್ ಮುಕ್ತ ಶುದ್ಧ ಕುಡಿಯುವ ನೀರು ಪೂರೈಸಲು 1ನೇ ಹಣಕಾಸು ಯೋಜನೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಡಿ ಯೋಜನೆ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.
ಕ್ಷೇತ್ರಾದ್ಯಂತ ರಸ್ತೆಗಳ ಸುಧಾರಣೆಗೆ ಸರ್ಕಾರ ರು. 70 ಕೋಟಿ ಮಂಜೂರು ಮಾಡಿದ್ದು, ಈಗಾಗಲೇ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭವಾಗಿವೆ. ವರ್ಷದೊಳಗೆ ಎಲ್ಲ ರಸ್ತೆಗಳು ಅಭಿವೃದ್ಧಿಯಾಗಲಿವೆ ಎಂದರು.
ಚುನಾವಣೆಯಲ್ಲಿ ಭಾರಿ ಬಹುಮತ ನೀಡಿ ಅಧಿಕಾರ ಕೊಟ್ಟಿರುವ ತಮಗೆ ಅನ್ಯಾಯ ಮಾಡುವುದಿಲ್ಲ ಎಂದ ಸಚಿವರು, ಕಂದಾಯ ಗ್ರಾಮ ಪರಿವರ್ತನೆಯಾಗಿರುವ ದಾಸರಹಳ್ಳಿ ತಾಂಡಾಕ್ಕೆ ಶೀಘ್ರದಲ್ಲಿ ಗ್ರಾಮಲೆಕ್ಕಾಧಿಕಾರಿ ನೇಮಿಸುವ ಭರವಸೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಐಗೋಳ ಚಿದಾನಂದ, ಎಂ. ಪರಮೇಶ್ವರಪ್ಪ, ಎಪಿಎಂಸಿ ಅಧ್ಯಕ್ಷ ವಾರದ ಗೌಸ್ ಮೊಹಿದ್ದೀನ್, ಮುಖಂಡ ಅರವಳ್ಳಿ ವೀರಣ್ಣ, ಅಟವಾಳಗಿ ಕೊಟ್ರೇಶ್, ಎಲ್. ಚಂದ್ರನಾಯ್ಕ, ವೀರಸಿಂಗ್ ರಾಠೋಡ್, ಪುಟ್ಯಾನಾಯ್ಕ, ಜಿಪಂ ಸದಸ್ಯ ಜಿ. ವಸಂತ, ತಾಪಂ ಸದಸ್ಯ ಕೃಷ್ಣನಾಯ್ಕ ಇದ್ದರು. ಗ್ರಾಪಂ ಮಾಜಿ ಅಧ್ಯಕ್ಷ ಸುರೇಶನಾಯ್ಕ ಸ್ವಾಗತಿಸಿದರು.

ಬಾಲನ್ಯಾಯ ಕಾಯ್ದೆ ಕಾರ್ಯಾಗಾರ
ಬಳ್ಳಾರಿ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಿಶೇಷ ಮಕ್ಕಳ ಪೊಲೀಸ್ ಘಟಕ ಸಹಯೋಗದಲ್ಲಿ ಈಚೆಗೆ ನಗರದ ಬಿಡಿಡಿಎಸ್ ಸಂಸ್ಥೆ ಸಭಾಂಗಣದಲ್ಲಿ ಪೊಲೀಸ್ ಇಲಾಖೆ ಮಕ್ಕಳ ಕಲ್ಯಾಣಾಧಿಕಾರಿ, ಪೊಲೀಸ್ ಸಿಬ್ಬಂದಿಗಾಗಿ ಬಾಲನ್ಯಾಯ ಕಾಯ್ದೆ ಕುರಿತು ಕಾರ್ಯಾಗಾರ ಜರುಗಿತು. ಒಂದನೇ ಅಪರ ಜಿಲ್ಲಾ, ಸತ್ರ ನ್ಯಾಯಾಧೀಶ ಎಂ.ಎಸ್. ಪಾಟೀಲ್ ಉದ್ಘಾಟಿಸಿದರು. ಬಾಲನ್ಯಾಯ ಕಾಯ್ದೆ-2000, ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಮಕ್ಕಳ ದೌರ್ಜನ್ಯ ನಿಷೇಧ ಕಾಯ್ದೆ ಬಗ್ಗೆ ಉಪನ್ಯಾಸ ನೀಡಲಾಯಿತು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪೀರ್ ಮೊಹ್ಮದ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಪ್ರಸಾದ್ ಗೋಕಾಲೆ, ವಕೀಲೆ ರಮಾದೇವಿ, ಪದ್ಮಿನಿ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಮೌನೇಶ್ ಇದ್ದರು. ವಾಸಿಂ ಅಕ್ರಂ ನಿರೂಪಿಸಿದರು. ಚನ್ನಬಸಪ್ಪ ಪಾಟೀಲ್ ವಂದಿಸಿದರು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮೊಹ್ಮದ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement