ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಸಹಕಾರಿ ಸಂಸ್ಥೆ ಗೌರವ ಹೆಚ್ಚಿಸಿ

Lingaraj Badiger
Updated On : 2 Jan 2014, 12:25 pm

ಹೊಸಪೇಟೆ: ಸಹಕಾರಿ ಸಂಸ್ಥೆ ಮೂಲ ತತ್ವಗಳನ್ನು ತಿಳಿದು ವರ್ತಿಸುವ ಮೂಲಕ ಸಹಕಾರಿ ಸಂಸ್ಥೆಗಳ ಗೌರವ ಎತ್ತಿಹಿಡಿಯಿರಿ ಎಂದು ವಿಕಾಸ ಸೌಹಾರ್ದ ಸಹಕಾರಿ ಬ್ಯಾಂಕ್ ಅಧ್ಯಕ್ಷ ವಿಶ್ವನಾಥ ಚ. ಹಿರೇಮಠ ಹೇಳಿದರು.
ನಗರದ ವಿಕಾಸ ಸೌಹಾದ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಸೌಹಾರ್ದ ಸಹಕಾರಿ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಹಕಾರಿ ಸಂಸ್ಥೆಗಳು ಸಾಮಾಜಿಕ ಬದ್ಧತೆ ಹೊಂದಿರುವ ವ್ಯಾಪಾರಿ ಸಂಸ್ಥೆಗಳಾಗಿದ್ದು, ಸಂಸ್ಥೆ ಮೂಲ ಉದ್ದೇಶ, ಹಿನ್ನೆಲೆಗಳನ್ನು ಸಹಕಾರಿಗಳು ಅಗತ್ಯವಾಗಿ ತಿಳಿದುಕೊಳ್ಳಬೇಕಾಗಿದೆ. ಸಹಕಾರಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಸಹ ಸಹಕಾರಿ ತತ್ವಗಳನ್ನು ಸರಿಯಾಗಿ ಅರ್ಥೈಸಿಕೊಂಡು ಗ್ರಾಹಕರೊಂದಿಗೆ ಉತ್ತಮ ರೀತಿಯಲ್ಲಿ ವ್ಯವಹರಿಸುವ ಮೂಲಕ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಹೊಸ ಹೊಸ ವಿಚಾರಗಳನ್ನು ತಿಳಿಯುವ, ಅವುಗಳನ್ನು ಹೊಸ ರೂಪದೊಂದಿಗೆ ಕಾರ್ಯಗತಗೊಳಿಸುವ ಮೂಲಕ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಹಕಾರಿಗಳು, ಸಹಕಾರಿ ಸಂಸ್ಥೆಗಳ ಸಿಬ್ಬಂದಿ ಶ್ರಮವಹಿಸಬೇಕು ಎಂದು ಅವರು ಹೇಳಿದರು.
ವಿಕಾಸ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇ. ಉಮಾದೇವಿ, ಸೌಹಾರ್ದ ಸಹಕಾರಿ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾದ ಛಾಯಾ ದಿವಾಕರ್, ಎಸ್.ವಿ. ನಾಯಕ್, ಎ. ಚಂದ್ರಹಾಸ, ಅನಂತ ಜೋಶಿ, ವ್ಯವಸ್ಥಾಪಕರಾದ ಪ್ರವೀಣ ಶಹಪುರ, ಬ್ಯಾಂಕ್ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement