ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಬಸ್ ವ್ಯವಸ್ಥೆ ಕಲ್ಪಿಸಲು ಮನವಿ

Lingaraj Badiger
Updated On : 7 Jan 2014, 12:20 pm

ಹೊಸಪೇಟೆ: ತಾಲೂಕಿನ ವಡ್ಡರಹಳ್ಳಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಎಸ್‌ಎಫ್‌ಐ ತಾಲೂಕು ಸಮಿತಿ ಪದಾಧಿಕಾರಿಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗೆ ಮನವಿಪತ್ರ ಸಲ್ಲಿಸಿದರು.
ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಎಸ್‌ಎಫ್‌ಐ ತಾಲೂಕು ಸಮಿತಿಯ ಕಾರ್ಯದರ್ಶಿ ವಸಂತ ಕಲಾಲ್ ಮಾತನಾಡಿ, ಹೊಸಪೇಟೆ ನಗರಕ್ಕೆ ಗ್ರಾಮಾಂತರ ಪ್ರದೇಶವಾದ ವಡ್ಡರಹಳ್ಳಿಯಿಂದ ಶಾಲಾ-ಕಾಲೇಜಿಗೆ ಬರಲು ಸಕಾಲಕ್ಕೆ ಬಸ್‌ಗಳ ವ್ಯವಸ್ಥೆ ಇಲ್ಲ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಬಸ್‌ಪಾಸ್ ಹೊಂದಿದ್ದಾರೆ ಎಂಬ ಕಾರಣಕ್ಕೆ ಬಸ್‌ಗಳನ್ನು ವಿದ್ಯಾರ್ಥಿಗಳ ಶಾಲಾ-ಕಾಲೇಜುಗಳಿಗೆ ಹೋಗುವ ಸಮಯಕ್ಕೆ ಸಂಚಾರ ಮಾಡದೆ, ವಿದ್ಯಾರ್ಥಿಗಳೆಲ್ಲರೂ ಶಾಲಾ-ಕಾಲೇಜುಗಳಿಗೆ ಹೋದ ನಂತರ ಬಸ್‌ಗಳನ್ನು ಗ್ರಾಮಾಂತರ ಪ್ರದೇಶಕ್ಕೆ ಕಳುಹಿಸುತ್ತಿರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ವಿದ್ಯೆಯಿಂದ ವಂಚಿತರಾಗುತ್ತಿದ್ದಾರೆ. ತಕ್ಷಣವೇ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.
ಎಸ್‌ಎಫ್‌ಐ ಜಿಲ್ಲಾ ಸಹ ಕಾರ್ಯದರ್ಶಿ ಟಿ. ಶರತಕುಮಾರ್, ತಾಲೂಕು ಅಧ್ಯಕ್ಷ ಪಂಪಾನಂದ, ಎಂ.ಪಿ. ಪ್ರತಾ, ಕೆ. ರಮೇಶ್ ಇತರರು ಪ್ರತಿಭಟನೆಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement