ಬಿಜೆಪಿ ಹಿಂದುಳಿದ ವರ್ಗ ಮೋರ್ಚಾಕ್ಕೆ ನೇಮಕ
ಬಳ್ಳಾರಿ: ಭಾರತೀಯ ಜನತಾ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದ ಬಳ್ಳಾರಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಸಮಿತಿಗೆ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ನೇಮಿರಾಜ ನಾಯ್ಕ್ ಸೂಚನೆ ಮೇರೆಗೆ ನೂತನ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ದತ್ತಾತ್ರೇಯರೆಡ್ಡಿ ತಿಳಿಸಿದ್ದಾರೆ.
ಸಿರುಗುಪ್ಪ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಮುದುಕಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ್, ಸಂಡೂರು ಕ್ಷೇತ್ರ ಅಧ್ಯಕ್ಷರಾಗಿ ಕೊಟ್ರೇಶ, ಪ್ರಧಾನ ಕಾರ್ಯದರ್ಶಿಯಾಗಿ ಓಬಳೇಶಪ್ಪ, ಕೂಡ್ಲಿಗಿ ಕ್ಷೇತ್ರ ಅಧ್ಯಕ್ಷರಾಗಿ ರಾಜಶೇಖರ ಸಫಾರಿ, ಪ್ರಧಾನ ಕಾರ್ಯದರ್ಶಿಯಾಗಿ ಎ.ಜಿ. ಮಹಾದೇವಪ್ಪ, ಹಗರಿಬೊಮ್ಮನಹಳ್ಳಿ ಕ್ಷೇತ್ರ ಅಧ್ಯಕ್ಷರಾಗಿ ಬಣಕಾರ ಗೋಣೆಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದಪ್ಪ, ಹೂವಿನಹಡಗಲಿ ಕ್ಷೇತ್ರ ಅಧ್ಯಕ್ಷರಾಗಿ ಗದಿಗಿನ ಮಲ್ಲಣ್ಣ, ಪ್ರಧಾನ ಕಾರ್ಯದರ್ಶಿಯಾಗಿ ಲಕ್ಕಿ ರಾಮಣ್ಣ, ಹೊಸಪೇಟೆ ಕ್ಷೇತ್ರ ಅಧ್ಯಕ್ಷರಾಗಿ ಎನ್. ರೂಪೇಶ, ಪ್ರಧಾನ ಕಾರ್ಯದರ್ಶಿಯಾಗಿ ಮರಿಸ್ವಾಮಿ, ಕಂಪ್ಲಿ ಕ್ಷೇತ್ರ ಅಧ್ಯಕ್ಷರಾಗಿ ಚಾನಾಳ ಆನಂದ, ಪ್ರಧಾನ ಕಾರ್ಯದರ್ಶಿಯಾಗಿ ಟಿ. ರಮೇಶ, ಬಳ್ಳಾರಿ ಗ್ರಾಮಾಂತರ ಕ್ಷೇತ್ರ ಅಧ್ಯಕ್ಷರಾಗಿ ಸುರೇಶ, ಪ್ರಧಾನ ಕಾರ್ಯದರ್ಶಿಯಾಗಿ ಕೊಟ್ರೇಶ ನೇಮಕವಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.