ಟ್ಯಾಲಿ ತರಬೇತಿ ಮುಕ್ತಾಯ
ತರಬೇತಿ ಶಿಬಿರದಲ್ಲಿ ಪಡೆದ ಅನುಭವ ಮತ್ತು ಕೌಶಲ್ಯಗಳನ್ನು ಪೂರ್ಣವಾಗಿ ಸದುಪಯೋಗ ಪಡಿಸಿಕೊಂಡು ಸ್ವಯಂ ಉದ್ಯೋಗ ಹೊಂದುವಂತೆ ಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯೆ ನಸೀಮಾ ಬೇಗಂ ಕರೆ ನೀಡಿದರು. ಬಳ್ಳಾರಿಯ ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ 30 ದಿನಗಳ ಕಾಲ ಆಯೋಜಿಸಿದ್ದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ ಸಮಾರೋಪದಲ್ಲಿ ಅವರು ಮಾತನಾಡಿದರು. ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಎಫ್.ಬಿ. ಬಾಳಿಕಾಯಿ ಮಾತನಾಡಿದರು. ಶಿಬಿರಾರ್ಥಿಗಳಾದ ಪಂಪನಗೌಡ, ಕೆ. ನರಸಪ್ಪ, ಶಮೀನಾ, ಅನ್ನಪೂರ್ಣಾ ಅವರು ತರಬೇತಿ ಬಗೆಗೆ ತಮ್ಮ ಅನಿಸಿಕೆ ಹಂಚಿಕೊಂಡರು. ಸಂಸ್ಥೆಯ ಉಪನ್ಯಾಸಕ ಎಚ್.ಪಿ. ಕಲ್ಲೇಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.