ಹಂಪಿ ಉತ್ಸವ: ಮದ್ಯಪಾನ, ಮಾರಾಟ ನಿಷೇಧ
ಕೊಪ್ಪಳ: ಹಂಪಿ ಉತ್ಸವ ಅಂಗವಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯ ಗಂಗಾವತಿ ತಾಲೂಕಿನ ವಿರೂಪಾಪುರಗಡ್ಡೆ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಮದ್ಯದ ಅಂಗಡಿಗಳಲ್ಲಿ ಮದ್ಯ ಮಾರಾಟ, ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಪಿ. ಮೋಹನರಾಜ್ ಆದೇಶ ಹೊರಡಿಸಿದ್ದಾರೆ. ಹಂಪಿ ಉತ್ಸವದ ಸಂದರ್ಭದಲ್ಲಿ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಜ. 10ರಂದು ಬೆಳಗ್ಗೆ 6ರಿಂದ ಜ.13ರ ಬೆಳಗ್ಗೆ 6ರ ವರೆಗೆ ಮದ್ಯಪಾನ, ಮಾರಾಟ ನಿಷೇಧಿಸಲಾಗಿದೆ. ಅಬಕಾರಿ ಉಪ ಆಯುಕ್ತರ ಮುಖಂಡತ್ವದಲ್ಲಿ ತನಿಖಾ ತಂಡ ರಚಿಸಿ, ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು, ಕಾರ್ಯನಿರ್ವಹಿಸಲು ಆದೇಶಿಸಿದ್ದಾರೆ. ಜಾರಿಗೆ ತರುವಲ್ಲಿ ನಿರ್ಲಕ್ಷ್ಯತನ ತೋರಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.