ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಬೇಸಾಯ ಕ್ರಮಗಳ ತರಬೇತಿ ಶಿಬಿರ

Lingaraj Badiger
Updated On : 17 Jan 2014, 10:49 am

ಬಳ್ಳಾರಿ: ಬಾಗಲಕೋಟೆಯ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರವು ತರಕಾರಿ ಮತ್ತು ಪುಷ್ಪ ಬೆಳೆಗಳ ಸಂರಕ್ಷಿತ ಬೇಸಾಯ ಕ್ರಮಗಳ ಬಗ್ಗೆ ಮೂರು ದಿನಗಳ ರಾಜ್ಯ ಮಟ್ಟದ ತರಬೇತಿ ನೀಡಲು ಉದ್ದೇಶಿಸಿದೆ.
ಅರ್ಹ ಅಭ್ಯರ್ಥಿಗಳು ಜ. 18ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಆರ್. ಹಿರೇಮಠ ತಿಳಿಸಿದ್ದಾರೆ. ಶಿಬಿರದಲ್ಲಿ ವಿವಿಧ ತರಕಾರಿ ಮತ್ತು ಪುಷ್ಪ ಬೆಳೆಗಳಲ್ಲಿ ಅಧಿಕ ಇಳುವರಿಗೆ ಅನುಸರಿಸಬೇಕಾದ ಆಧುನಿಕ ಸಂರಕ್ಷಿತ ಬೇಸಾಯ ಕ್ರಮಗಳು, ಸಾವಯವ ಕೃಷಿ ತಂತ್ರಜ್ಞಾನ, ಸೂಕ್ತ ನೀರಾವರಿ ಪದ್ಧತಿಗಳು, ಕೊಯ್ಲೋತ್ತರ ಹಾಗೂ ಸಂಸ್ಕರಣಾ ಕ್ರಮಗಳು, ಮಾರುಕಟ್ಟೆ ವಿಧಾನಗಳು, ಹಣಕಾಸಿನ ನಿರ್ವಹಣೆ ಮತ್ತಿತರ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು.  ತರಬೇತಿಯಲ್ಲಿ ಭಾಗವಹಿಸುವವರಿಗೆ ಉಚಿತ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಆಸಕ್ತ ರೈತರು, ರೈತ ಮಹಿಳೆಯರು, ಸ್ವಸಹಾಯ ಸಂಘದ ಸದಸ್ಯರು, ಯುವಕರು ತಮ್ಮ ಹೆಸರು, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ ಮತ್ತಿತರ ವಿವರಗಳನ್ನು ಜನವರಿ 18ರೊಳಗಾಗಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿವಿವಿ ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟೆ- 587103 ಕಚೇರಿಯನ್ನು ಅಥವಾ ದೂ.ಸಂ. 08354-244028, 244048, ಮೊ.ಸಂ. 8050502960ನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement