ಮಲಬಾರ್ ಗೋಲ್ಡ್, ಡೈಮಂಡ್ಸ್ ಪ್ರದರ್ಶನ
ಹೊಸಪೇಟೆ: ನಗರದಲ್ಲಿ ಪ್ರಥಮ ಬಾರಿಗೆ ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ನ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಾಗುತ್ತಿರುವುದು ಸ್ಥಳೀಯ ಗ್ರಾಹಕರಿಗೆ ಸಂತಸದ ಸಂಗತಿಯಾಗಿದೆ ಎಂದು ಸ್ಥಳೀಯ ಉದ್ಯಮಿ ಸದಾಶಿವ ರೆಡ್ಡಿ ಹೇಳಿದರು. ನಗರದ ಖಾಸಗಿ ಹೋಟೆಲ್ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ನ ಚಿನ್ನಾಭರಣ ಪ್ರದರ್ಶನ ಹಾಗೂ ಮಾರಾಟ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಮಲಬಾರ್ ಸಂಸ್ಥೆಯ ನಿರ್ದೇಶಕ ರೆಹಮಾನ್ ಮಾತನಾಡಿ, ಪ್ರತಿಯೊಬ್ಬರ ಅಭಿರುಚಿಗೆ ತಕ್ಕಂತೆ ಅಧುನಿಕ ಮತ್ತು ಸಾಂಪ್ರದಾಯಿಕ ವಿನ್ಯಾಸದ ಆಭರಣಗಳನ್ನು ಮಾರಾಟ ಕೇಂದ್ರದಲ್ಲಿ ವ್ಯವಸ್ಥೆಗೊಳಿಸಲಾಗಿದೆ ಎಂದರು. ಸಂಸ್ಥೆಯ ನಿರ್ದೇಶಕ ಜಾಬೀದ್, ಸಂಸ್ಥೆಯ ಜನರಲ್ ಮ್ಯಾನೇಜರ್ ಶಶಾಂಕ ಏಕಬೋಟೆ, ಉದ್ಯಮಿ ಪ್ರಣೀತ್ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.