ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಗಣರಾಜ್ಯೋತ್ಸವ: ಇಂದು ವಿವಿಧ ಕಾರ್ಯಕ್ರಮ

Mainashree
Updated On : 26 Jan 2014, 11:21 am

ಬಳ್ಳಾರಿ: ಜಿಲ್ಲಾ ಕ್ರೀಡಾಂಗಣದಲ್ಲಿ ಜ. 26ರಂದು ಗಣರಾಜ್ಯೋತ್ಸವ ನಿಮಿತ್ತಬೆಳಗ್ಗೆ 8.45ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಗಾಂಧೀಜಿ ಪ್ರತಿಮೆಗೆ ಗೌರವ ಸಲ್ಲಿಸಿ, 9ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸುವರು. 9.5ಕ್ಕೆ ಗೌರವ ಸ್ವೀಕಾರ, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಶೋಭಾ ಬೆಂಡಿಗೇರಿ, ಬಳ್ಳಾರಿ ಮತ್ತು ಕೊಪ್ಪಳದ ಲೋಕಸಭಾ ಸದಸ್ಯರು, ಜಿಲ್ಲೆಯ ವಿವಿಧ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು, ಸಾರ್ವಜನಿಕರು ಭಾಗವಹಿಸಲಿದ್ದಾರೆ. ಸಂಜೆ 6 ಗಂಟೆಗೆ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement