ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಗಣರಾಜ್ಯೋತ್ಸವ: ಇಂದು ಸಾಂಸ್ಕೃತಿಕ ಕಾರ್ಯಕ್ರಮ

Mainashree
Updated On : 26 Jan 2014, 11:21 am

ಬಳ್ಳಾರಿ: ಗಣರಾಜ್ಯೋತ್ಸವ ಪ್ರಯುಕ್ತ ಜ. 26ರಂದು ಸಂಜೆ 6 ಗಂಟೆಗೆ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ಬಿ. ನಾಗರಾಜ್ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಳ್ಳಾರಿಯ ಸಿ.ಎಂ.ಬಿ. ದಿಲೀಪ್ ಕುಮಾರ್ ಅವರಿಂದ ಏಕಪಾತ್ರಾಭಿನಯ, ಸಿರುಗುಪ್ಪದ ವೀರೇಶ್ ದಳವಾಯಿ ಮತ್ತು ಸಂಗಡಿಗರಿಂದ ದೇಶ ಭಕ್ತಿಗೀತೆಗಳ ಸಮೂಹ ಗಾಯನ, ಹೊಸಪೇಟೆ ಕಲಾವಾಣಿ ನೃತ್ಯ ಶಾಲೆಯಿಂದ ಸಮೂಹ ನೃತ್ಯ ನಡೆಯಲಿದೆ. ಅಲ್ಲದೆ ವಿವಿಧ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement