ರಸ್ತೆ ಸುರಕ್ಷತಾ ಸಪ್ತಾಹ:ಕಾಲ್ನಡಿಗೆ ಜಾಥಾ
ಬಳ್ಳಾರಿ: ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಕಾಲ್ನಡಿಗೆ ಜಾಥಾಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಚೇತನ್ಸಿಂಗ್ ರಾಥೋಡ್ ಅವರು ಚಾಲನೆ ನೀಡಿದರು. ಕಾಲ್ನಡಿಗೆ ಜಾಥಾವು ನಗರದ ದುರ್ಗಮ್ಮ ದೇವಸ್ಥಾನದಿಂದ ಆರಂಭವಾಗಿ ನಗರದ ಗಡಿಗಿ ಚನ್ನಪ್ಪ ವೃತ್ತ, ಮೋತಿ ವೃತ್ತದ ಮೂಲಕ ಅಂಬೇಡ್ಕರ್ ವೃತ್ತವದೆರೆಗೆ ನಡೆಯಿತು. ಜಾಥಾದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬ, ಡಿವೈಎಸ್ಪಿ ಮುರುಗಣ್ಣ, ಸಂಚಾರಿ ಪೊಲೀಸ್ ಠಾಣೆ ಸಿಪಿಐ ಲಿಂಗರಾಜ್ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು, ವೈದ್ಯರು, ಇತರರು ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.