ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಲಿಂಗದಹಳ್ಳಿ: ಫೆ.12ರಂದು ಸಾಮೂಹಿಕ ವಿವಾಹ

Mainashree
Updated On : 26 Jan 2014, 11:22 am

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಗ್ರಾಮ ಘಟಕದಿಂದ ಶ್ರೀ ವಾಲ್ಮೀಕಿ ದೇವಸ್ಥಾನ ಮತ್ತು ಮೂರ್ತಿ ಪ್ರತಿಷ್ಠಾಪನೆ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಫೆ.12ರಂದು ಜರುಗಲಿದೆ. ಫೆ.12ರಂದು ಬೆಳಿಗ್ಗೆ 4ರಿಂದ ಶ್ರೀ ವಾಲ್ಮೀಕಿ ಮಹರ್ಷಿ ವಿಗ್ರಹ ಪ್ರತಿಷ್ಠಾಪನೆ ಹಾಗೂ ಧ್ವಜಸ್ತಂಭ ಮತ್ತು 6.45ರಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿವೆ. ಜ.30ರ ಒಳಗಾಗಿ ದೇವಸ್ಥಾನಕ್ಕೆ ಆಗಮಿಸಿ ವಧೂವರರ ಹೆಸರುಗಳನ್ನು ನೋಂದಾಯಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: 96868 46403, 94835 87821 ಸಂಪರ್ಕಿಸಬಹುದು ಎಂದು ಕಾರ್ಯಕ್ರಮ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement