ಬಳ್ಳಾರಿ

ಪೌರ ಕಾರ್ಮಿಕರನ್ನು ಕಾಯಂಗೊಳಿಸಲು ಒತ್ತಾಯ

ಹೊಸಪೇಟೆ: ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರ ಸೇವಾ ನೌಕರರನ್ನು ಕಾಯಂಗೊಳಿಸಲು ಒತ್ತಾಯಿಸಿ ಪೌರ ಕಾರ್ಮಿಕರ ರಾಜ್ಯಮಟ್ಟದ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಸ್ಲಂ ಜನಾಂದೋಲನ-ಕರ್ನಾಟಕ ರಾಜ್ಯ ಮುಖಂಡ ರಾಮಚಂದ್ರ ತಿಳಿಸಿದರು.  
ಈ ಕುರಿತು ಪ್ರಕಟಣೆ ನೀಡಿರುವ ಅವರು, ಹೊಸಪೇಟೆಯ ಸಮಾನತೆ ಯೂನಿಯನ್, ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳ ಪೌರಕಾರ್ಮಿಕರ ಮಹಾಸಂಘ, ಸ್ಲಂ ಜನಾಂದೋಲನ-ಕರ್ನಾಟಕ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಕಾವಲಿ ಸಮಿತಿ ಸಂಯುಕ್ತವಾಗಿ ಸಮಾವೇಶ ಸಂಘಟಿಸಲಿದೆ ಎಂದರು.
ರಾಜ್ಯದ್ಯಂತ ಇರುವ 228ಕ್ಕೂ ಹೆಚ್ಚು ಪಪಂ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ 38 ಸಾವಿರಕ್ಕೂ ಅಧಿಕ ದಿನಗೂಲಿ, ಪೌರ ಕಾರ್ಮಿಕರು, ಚಾಲಕರು, ವಾಟರ್‌ಮನ್‌ಗಳು ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಗುತ್ತಿಗೆ ಪದ್ಧತಿ ಎಂಬುದು ಆಧುನಿಕ ಜೀತ ಪದ್ಧತಿ ಅಲ್ಲದೇ ಮತ್ತೇನಲ್ಲ. ಖಾಸಗೀಕರಣದ ಭಾಗವಾಗಿ ಆಡಳಿತ ಸುಧಾರಣೆ ಹೆಸರಿನಲ್ಲಿ ನಾಗರಿಕ ಸೇವೆಗಳನ್ನು ಖಾಸಗೀಕರಿಸುವ ಯತ್ನ ಇದರ ಹಿಂದಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

CJP ಯ 'ತಿರಂಗಾ ಮೆರವಣಿಗೆ: 6,000 ಪೊಲೀಸರು, 220 ಸಿಎಪಿಎಫ್ ತುಕಡಿಗಳ ನಿಯೋಜನೆ, ಸಿಸಿಟಿವಿ ಕಣ್ಗಾವಲು!

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ