ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಸರ್ಕಾರಿ ಆಸ್ಪತ್ರೆಗೆ ತಜ್ಞ ವೈದ್ಯರ ನೇಮಿಸಿ: ಆಗ್ರಹ

Mainashree
Updated On : 15 Jul 2014, 9:43 am

ಹೊಸಪೇಟೆ: ನಗರದ 100 ಹಾಸಿಗೆಗಳ ಆಸ್ಪತ್ರೆಗೆ ತಜ್ಞ ವೈದ್ಯರನ್ನು ತಕ್ಷಣ ನೇಮಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಘಟಕದ ಪದಾಧಿಕಾರಿಗಳು ನಗರದ ಸಹಾಯಕ ಆಯುಕ್ತ ಪಿ. ಸುನೀಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ರಾಜನಹಳ್ಳಿ ಗುರುಪೀಠದ ಜಿಲ್ಲಾ ಧರ್ಮದರ್ಶಿ ಬಿ.ಎಸ್. ಜಂಬಯ್ಯ ನಾಯಕ ಮಾತನಾಡಿ, ಹೊಸಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯರ ಕೊರತೆ ಎದುರಿಸುತ್ತಿದೆ. 100 ಹಾಸಿಗೆಗಳ ಆಸ್ಪತ್ರೆಯಲ್ಲಿ ಕೇವಲ 6 ಜನ ವೈದ್ಯರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಆಸ್ಪತ್ರೆಗೆ ಒಟ್ಟು 13  ವೈದ್ಯರ ಅಗತ್ಯವಿದೆ. ಇರುವ ಆರು ಜನ ವೈದ್ಯರಲ್ಲಿ ಬಹುತೇಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದು, ಯಾವಾಗ ಮರಳುತ್ತಾರೋ ತಿಳಿಯದಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ತಿಂಗಳೊಂದರಲ್ಲಿಯೇ ಹೆರಿಗೆ ಸೇರಿದಂತೆ ನೂರಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗಳು ನಡೆಯುತ್ತಿದ್ದರೂ ಅರವಳಿಕೆ ತಜ್ಞರನ್ನು ಬಳ್ಳಾರಿಗೆ ಡೆಪ್ಯೂಟ್ ಮಾಡಿರುವುದರಿಂದ ಶಸ್ತ್ರಚಿಕಿತ್ಸೆ ನಡೆಯುತ್ತಿಲ್ಲ. ಇದರಿಂದ ರೋಗಿಗಳು ಬಳ್ಳಾರಿಗೆ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಕಾರ್ಯದರ್ಶಿ ಪೂಜಾರ್ ವೆಂಕೋಬನಾಯಕ ಮಾತನಾಡಿದರು. ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಅಧ್ಯಕ್ಷ ಕಿಚಡಿ ಶ್ರೀನಿವಾಸ, ಖಜಾಂಚಿ ಹಾಗೂ ನಗರಸಭೆ ಸದಸ್ಯ ಗುಡಿಗುಂಟಿ ಮಲ್ಲಿಕಾರ್ಜುನ, ಜಿಲ್ಲಾ ಕಾರ್ಯದರ್ಶಿ ತಾರಿಹಳ್ಳಿ ವೆಂಕಟೇಶ್, ಜಿಲ್ಲಾ ನಿರ್ದೇಶಕ ತಳವಾರ ದುರುಗೇಶ್, ಕಣ್ಣಿ ಶ್ರೀಕಂಠ, ದಂಗಡಿ ಕೃಷ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement