ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಡಾ. ಶ್ರೀನಿವಾಸ್‌ಗೆ ಟಿಕೆಟ್ ನೀಡಲು ಆಗ್ರಹ

Lingaraj Badiger
Updated On : 18 Jul 2014, 11:22 am

ಹೊಸಪೇಟೆ: ಬಳ್ಳಾರಿ ಗ್ರಾಮೀಣ ವಿಧಾಸಸಭಾ ಕ್ಷೇತ್ರದ ಉಪಚುನಾವಣೆಗೆ ಮನೋವೈದ್ಯ ಡಾ. ಟಿ.ಆರ್. ಶ್ರೀನಿವಾಸ್ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ವಿಜಯನಗರ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದ ಬಿಜೆಪಿ ಕಾರ್ಯಕರ್ತರು ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಮುನಿರಾಜು ಗೌಡ ಅವರಿಗೆ ಮನವಿ ಸಲ್ಲಿಸಿದರು.
ಡಾ. ಶ್ರೀನಿವಾಸ್ ಜಿಲ್ಲೆಯಾದ್ಯಂತ ಚಿರಪರಿಚಿತರಾಗಿದ್ದು, ಉಚಿತ ಆರೋಗ್ಯ ಶಿಬಿರ ನಡೆಸುವ ಮೂಲಕ ಜನಮನ್ನಣೆ ಗಳಿಸಿದ್ದಾರೆ. ಲೋಕಸಭೆ ಚುನಾವಣೆ ವೇಳೆ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಪ ಚುನಾವಣೆಯಲ್ಲಿ ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡಲು ಪಕ್ಷದ ಮುಖಂಡರಿಗೆ ಸೂಚಿಸುವಂತೆ ಕಾರ್ಯಕರ್ತರಾದ ಡಿ. ರವಿಶಂಕರ್, ಬಿ. ಹನುಮಂತಪ್ಪ, ಪಿ. ಬಾಬು, ಗೋಣಿ ಜಂಭಣ್ಣ, ಅಂಜಿನಪ್ಪ, ಡಿ. ಚಂದ್ರಶೇಖರ್, ಅವಿನಾಶ್ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement